ವೀಸಾ ಪ್ರಕರಣ : ಕಾರ್ತಿ ಚಿದಂಬರಂಗೆ ಜಾಮೀನು
ಕಾರ್ತಿ ಪಿ. ಚಿದಂಬರಂ | PC : PTI
ಹೊಸದಿಲ್ಲಿ: ಚೀನಾ ವೀಸಾ ಹಗರಣದಲ್ಲಿ ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಕಾರ್ತಿ ಪಿ. ಚಿದಂಬರಂಗೆ ದಿಲ್ಲಿಯರೋಸ್ ಅವೆನ್ಯೂ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.
ಈ ಹಿಂದೆ ತಲಾ 1 ಲಕ್ಷ ರೂಪಾಯಿಯ ವೈಯಕ್ತಿಕ ಬಾಂಡ್ ನ ಮೇಲೆ ಪ್ರಕರಣದ ಇತರ ಮೂವರು ಆರೋಪಿಗಳಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿತ್ತು. ಈ ಮೂವರು ಆರೋಪಿಗಳೆಂದರೆ ಚಿದಂಬರಂ ಅವರ ಮಾಜಿ ಚಾರ್ಟರ್ಡ್ ಅಕೌಂಟೆಂಟ್ ಎಸ್. ಭಾಸ್ಕರನ್, ವಿಕಾಸ್ ಮಖರಿಯಾ ಹಾಗೂ ಮನ್ಸೂರ್ ಸಿದ್ದೀಕಿ.
ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರು ಕೇಂದ್ರ ಗೃಹ ಸಚಿವರಾಗಿದ್ದಾಗ 2011ರಲ್ಲಿ 263 ಚೀನಾ ಪ್ರಜೆಗಳಿಗೆ ವೀಸಾ ನೀಡಿದ ಆರೋಪಕ್ಕೆ ಸಂಬಂಧಿಸಿ ಕಾರ್ತಿ ಚಿದಂಬರಂ ಹಾಗೂ ಇತರ ಮೂವರ ವಿರುದ್ಧ ಜಾರಿ ನಿರ್ದೇಶನಾಲಯ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿತ್ತು.
ಸಿಬಿಐ ದಾಖಲಿಸಿದ ಎಫ್ಐಆರ್ ಅನುಸರಿಸಿ ಜಾರಿ ನಿರ್ದೇಶನಾಲಯ ಅವರ ವಿರುದ್ಧ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಈ ಪ್ರಕರಣ ದಾಖಲಿಸಿತ್ತು.