ಜ್ಞಾನವಾಪಿ ಮಸೀದಿಯ ಯಥಾ ಸ್ಥಿತಿ ಕಾಪಾಡುವ ಅರ್ಜಿ ಮರು ಊರ್ಜಿತಗೊಳಿಸಿದ ಸುಪ್ರೀಂ
Photo: PTI
ಹೊಸದಿಲ್ಲಿ: ಭಾರತೀಯ ಪುರಾತತ್ವ ಇಲಾಖೆಯಿಂದ ಜ್ಞಾನವಾಪಿ ಮಸೀದಿಯ ಸರ್ವೇಗೆ ತಡೆ ವಿಧಿಸಿದ್ದ ಸುಪ್ರೀಂ ಕೋರ್ಟ್ ಯಥಾಸ್ಥಿತಿ ಕಾಪಾಡುವಂತೆ ಕೋರಲಾಗಿದ್ದ ಅರ್ಜಿಯನ್ನು ಮರು ಊರ್ಜಿತಗೊಳಿಸಿ ವಿಚಾರಣೆಗೆ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.
ಚಂದ್ರಚೂಡ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲ, ಮನೋಜ್ ಮಿಶ್ರಾ ಅವರನ್ನು ಒಳಗೊಂಡ ಪೀಠ ಪ್ರಕರಣದ ವಿಚಾರಣೆ ನಡೆಸಿತು. ದೇವಾಲಯದ ಮೇಲೆ ಮಸೀದಿ ನಿರ್ಮಿಸಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ)ಯಿಂದ ಸಮೀಕ್ಷೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆಗೆ ಬದಲಾಗಿ, ನ್ಯಾಯಾಲಯ ಸಮಿತಿಯ ಮೂಲ ಅರ್ಜಿಯನ್ನು ವಿಲೇವಾರಿ ಮಾಡಿ ಜುಲೈ 24ರಂದು ಆದೇಶಿಸಿತ್ತು ಎಂಬ ಅಂಶವನ್ನು ಜ್ಞಾನವಾಪಿ ಮಸೀದಿಯ ನಿರ್ವಹಣಾ ಸಮಿತಿ ಅಂಜುಮನ್ ಇಂತೆಝಾಮಿಯಾ ಪರ ಹಾಜರಾಗಿದ್ದ ಹಿರಿಯ ನ್ಯಾಯವಾದಿ ಹುಸೇಫಾ ಅಹ್ಮದಿ ಅವರು ಪೀಠದ ಗಮನಕ್ಕೆ ತಂದರು ಅವರ ಅಭಿಪ್ರಾಯವನ್ನು ಪೀಠ ಒಪ್ಪಿಕೊಂಡಿತು.
ಮಸೀದಿ ಸಮಿತಿ ಸಲ್ಲಿಸಿದ ವಿಶೇಷ ರಜಾಕಾಲದ ಅರ್ಜಿ (ಎಸ್ಎಲ್ಪಿ) ಯನ್ನು ಊರ್ಜಿತಗೊಳಿಸಲು ತನ್ನ ಯಾವುದೇ ಆಕ್ಷೇಪ ಇಲ್ಲ ಎಂದು ಉತ್ತರಪ್ರದೇಶ ಸರಕಾರ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ)ಯನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರ್ ತುಷಾರ್ ಮೆಹ್ತಾ ಹೇಳಿದರು. ಈ ನಡುವೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಮೀಕ್ಷೆ ಆದೇಶ ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ ಅರ್ಜಿಯನ್ನು ಅಲಹಾಬಾದ್ ಉಚ್ಚ ನ್ಯಾಯಾಲಯ ವಿಚಾರಣೆ ಪುನಾರಂಭಿಸಿದೆ.