Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗ್ಯಾರಂಟಿ ಯೋಜನೆಗಳು ಸಂವಿಧಾನದ ರಾಜ್ಯ...

ಗ್ಯಾರಂಟಿ ಯೋಜನೆಗಳು ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳ ಆಶಯಗಳಲ್ಲವೇ?

ಡಾ.ಡಿ. ಶ್ರೀನಿವಾಸ ಮಣಗಳ್ಳಿಡಾ.ಡಿ. ಶ್ರೀನಿವಾಸ ಮಣಗಳ್ಳಿ20 Feb 2025 11:49 AM IST
share
ಗ್ಯಾರಂಟಿ ಯೋಜನೆಗಳು ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳ ಆಶಯಗಳಲ್ಲವೇ?

ಪ್ರಸಕ್ತ ಬಹು-ಆಯಾಮಗಳ ಚರ್ಚೆಯಲ್ಲಿದೆ ಗ್ಯಾರಂಟಿ ಯೋಜನೆಗಳು. ಈ ಉಚಿತ ಯೋಜನೆಗಳನ್ನು ಜಗತ್ತಿನಲ್ಲೇ ಮೊದಲಾರಂಭಿಸಿದ್ದು ತಮಿಳುನಾಡಿನಲ್ಲಿ. ಅದುವರೆಗೂ ಉಚಿತ ಎನ್ನುವ ಪರಿಕಲ್ಪನೆಯಿರಲಿಲ್ಲ. ಅಂದರೆ ತಮಿಳುನಾಡಿನ ಫ್ರೀಬೀ ಸಂಸ್ಕೃತಿಯು ಆಯಾ ರಾಜಕೀಯ ಪಕ್ಷಗಳಿಗೆ ವೋಟು ತಂದುಕೊಡುವ ಜತೆಗೆ ಆ ರಾಜ್ಯದ ಅಭಿವೃದ್ಧಿಯೂ ಆಗತೊಡಗಿತು. ಹೇಗೆಂದರೆ, ಜನರಲ್ಲಿ ಕೊಡು ಮತ್ತು ಕೊಳ್ಳುವಿಕೆಯಿಂದ ಬೇಡಿಕೆ ದ್ವಿಗುಣಗೊಳ್ಳುತ್ತಾ, ತಲಾದಾಯವನ್ನು ಹೆಚ್ಚಿಸುವ ಮೂಲಕ ಆರ್ಥಿಕತೆಯನ್ನು ಸರಿದೂಗಿಸುವುದು. ಒಟ್ಟಾರೆಯಾಗಿ ಈ ವಿದ್ಯಮಾನಗಳು ದೇಶದ ಚುನಾವಣಾ ಆಧಾರಿತ ರಾಜಕೀಯ ವ್ಯವಸ್ಥೆಯ ದೌರ್ಬಲ್ಯಗಳನ್ನು ತೋರಿಸುತ್ತವೆ. ಚುನಾವಣೆಗಳಿಂದಾಗಿ ಜನರು ರಾಜಕೀಯ ಅನಕ್ಷರಸ್ಥರಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳು ಉಚಿತ ಯೋಜನೆಗಳನ್ನು ಮತಗಳಿಗಾಗಿ ಬಳಸಿಕೊಳ್ಳುತ್ತಿವೆ.

ಭಾರತದಲ್ಲಿ ಕಲ್ಯಾಣ ರಾಜ್ಯದ ಪರಿಕಲ್ಪನೆಯು ಸಂವಿಧಾನದ ನಾಲ್ಕನೇ ಭಾಗದಲ್ಲಿರುವ ರಾಜ್ಯ ನೀತಿಯ ನಿರ್ದೇಶನ ತತ್ವಗಳಲ್ಲಿ ತನ್ನ ನಾಗರಿಕರ ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ರಾಜ್ಯವು ಜವಾಬ್ದಾರನಾಗಿರಬೇಕು. ಸಂವಿಧಾನದ 39(ಎ), 47ನೇ ವಿಧಿಯು ಜನರ ಜೀವನ ಮಟ್ಟವನ್ನು ಹೆಚ್ಚಿಸುವುದು ರಾಜ್ಯದ ಪ್ರಾಥಮಿಕ ಜವಾಬ್ದಾರಿಯಾಗಿದೆ. ಇಂತಹ ಜನಕಲ್ಯಾಣ ಯೋಜನೆಗಳ ಮೂಲಕ ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳ ಕೆಲವಾದರೂ ಆಶಯಗಳು ನಿಜಗೊಳ್ಳುತ್ತವೆ. ಅಂಬೇಡ್ಕರ್ ಅವರು ಬಯಸಿದ್ದ ಸಮಾನತೆಯ ಪ್ರಜಾಪ್ರಭುತ್ವವು ಅನುಷ್ಠಾನಕ್ಕೆ ಬಂದಿದ್ದರೆ ಉಚಿತ ಯೋಜನೆಗಳ ಅವಶ್ಯಕತೆಯೇ ಇರುತ್ತಿರಲಿಲ್ಲ. ಶಿಕ್ಷಣ, ಆರೋಗ್ಯ ಹಾಗೂ ಉದ್ಯೋಗಗಳಲ್ಲಿ ಪ್ರಗತಿಯಾಗಿದ್ದರೆ ಉಚಿತ ಯೋಜನೆಗಳು ಅನವಶ್ಯಕವಾಗುತ್ತವೆ. ಅಲ್ಲದೆ ಚುನಾವಣಾ ಪ್ರಕ್ರಿಯೆಗಳು ಈ ಪ್ರಮಾಣದಲ್ಲಿ ಭ್ರಷ್ಟಗೊಂಡಿರದಿದ್ದರೆ ಅವು ಅನವಶ್ಯಕವಾಗುತ್ತಿದ್ದವು.

ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಐದು ಉಚಿತ ಯೋಜನೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಜನಸಾಮಾನ್ಯರಿಗೆ ತಲುಪುತ್ತಿರುವ ಹಿನ್ನೆಲೆಯಲ್ಲಿ ಘೋಷಿಸಿದ 5 ಗ್ಯಾರಂಟಿ ಯೋಜನೆಗಳಿಗೆ ಅಂದಾಜು 59 ಸಾವಿರ ಕೋಟಿ ರೂ.ಬೇಕು. ಈಗ 3 ಲಕ್ಷ ಕೋಟಿ ರೂ. ಗಾತ್ರದ ಕರ್ನಾಟಕ ಬಜೆಟ್‌ನಲ್ಲಿ ಯೋಜನೆಗೆ ಸಿಗುವುದು ಶೇ. 30-40. ಇದೀಗ ಗ್ಯಾರಂಟಿಗಳನ್ನೇ ನೀಡಿಬಿಟ್ಟರೆ ರಾಜ್ಯ ದಿವಾಳಿಯಾಗುತ್ತದೆ ಎಂಬ ವಾದ, ಇದಕ್ಕೆ ವ್ಯತಿರಿಕ್ತ ವಾದವೂ ಇದೆ. ಈ ಉಚಿತಗಳನ್ನು ಬೇಡ ಎನ್ನುತ್ತಿರುವವರು ಮೇಲ್ವರ್ಗದವರು, ಇಲ್ಲಿಯವರೆಗೆ ಸಮಾಜವನ್ನು ಶೋಷಣೆ ಮಾಡಿದವರು. ಅವರು ಇಷ್ಟು ವರ್ಷ ಸೋಮಾರಿಗಳಾಗಿ ಕುಳಿತು ಎಲ್ಲವನ್ನೂ ಪಡೆದವರು. ಆಗ ಆರ್ಥಿಕತೆಗೆ ಹೊಡೆತ ಬಿದ್ದಿರಲಿಲ್ಲ. ಆದರೆ ಈಗ ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಯುವ ಸಮುದಾಯ ಗ್ಯಾರಂಟಿ ಯೋಜನೆಯ ಲಾಭ ಪಡೆದ ಕೂಡಲೇ ಬೊಬ್ಬೆ ಹೊಡೆಯುತ್ತಿದ್ದಾರೆ ಎನ್ನುವುದು ಯೋಜನೆಯನ್ನು ಸಮರ್ಥಿಸುವವರ ವಾದ. ಇತ್ತೀಚೆಗೆ ಉಚಿತ ಕೊಡುಗೆಗಳ ಸಂಸ್ಕೃತಿಯನ್ನು ಸುಪ್ರಿಂಕೋರ್ಟ್ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಾ ‘‘ಸರಕಾರಗಳು ಜನರನ್ನು ಪರಾವಲಂಬಿಗಳನ್ನಾಗಿ ಮಾಡುತ್ತಿದೆ’’ ಅನ್ನುವ ಆತಂಕವನ್ನು ವ್ಯಕ್ತಪಡಿಸಿದೆ. ಜನರ ಸ್ವಾವವಂಬನೆಗೆ ಅವಕಾಶ ಕೊಡದಿರುವುದು ಸಂವಿಧಾನ ಜಾರಿಗೊಂಡ 75 ವರ್ಷಗಳೂ ಕಳೆದರೂ ಅಧಿಕಾರ ನಡೆಸಿದ ರಾಜಕೀಯ ಪಕ್ಷಗಳ ಸೋಲಲ್ಲವೇ?

ತಮಿಳುನಾಡಿನ ನಂತರ ದಿಲ್ಲಿಯಲ್ಲಿ ಉಚಿತಗಳ ಪರಿಣಾಮವಾಗಿ ದಶಕದ ಕಾಲ ಅಧಿಕಾರದ ಚುಕ್ಕಾಣಿ ಹಿಡಿದ ಎಎಪಿ ನಂತರ ಕರ್ನಾಟಕ ಮತ್ತು ತೆಲಂಗಾಣವೂ ಅದೇ ಮಾದರಿ ಅನುಸರಿಸಿ ಕಾಂಗ್ರೆಸ್ ಅಧಿಕಾರದ ಗದ್ದುಗೆಯನ್ನೇರಿದೆ. ಅದನ್ನೇ ವಿರೋಧಿಸುತ್ತಿದ್ದ ವಿರೋಧ ಪಕ್ಷಗಳು ಇಂದು ಅವರ ದಾರಿಯನ್ನೇ ಅನುಸರಿಸಲು ಹೊರಟಿವೆ. ಆದರೆ ಒಟ್ಟಾರೆಯಾಗಿ ಗ್ಯಾರಂಟಿ ಯೋಜನೆಗಳನ್ನು ಇಡಿಯಾಗಿ ವಿರೋಧಿಸುವುದು ಮತ್ತು ಒಪ್ಪಿಕೊಳ್ಳುವುದು ಕಷ್ಟ. ಜನರ ತಕ್ಷಣದ ಸಂಕಟವನ್ನು ಈ ಯೋಜನೆಗಳು ಪರಿಹರಿಸಿದಂತೆ ಕಾಣುತ್ತವೆಯಾದರೂ ದೀರ್ಘಕಾಲದಲ್ಲಿಯೂ ಇವು ತುಂಬಾ ಪ್ರಯೋಜನಕಾರಿಯೇ ಎನ್ನುವ ಪ್ರಶ್ನೆಗಳಿವೆ. ಈ ಯೋಜನೆಗಳ ಜೊತೆಗೆ ಕನಿಷ್ಠ ಕೂಲಿ ಹೆಚ್ಚಿಸುವ, ಭೂ ಹಂಚಿಕೆ ಮಾಡುವ (ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಮೂಲಭೂತ ಹಕ್ಕಾಗಿಸುವ ರಾಜಕೀಯ ಇಚ್ಛಾಶಕ್ತಿಯ ಕೊರತೆಯು ಎದ್ದುಕಾಣುತ್ತಿದೆ) ಜೊತೆಗೆ ಖಾಸಗಿಯಿಂದ ರಕ್ಷಿಸುವ ಆ ಮೂಲಕ ಗ್ಯಾರಂಟಿ ಯೋಜನೆಗಳು ಜನರ ದೀರ್ಘ ಭವಿಷ್ಯಕ್ಕೆ ಅನುಕೂಲವಾಗುವ ಚರ್ಚೆಗಳು ನಡೆಯಬೇಕು.

share
ಡಾ.ಡಿ. ಶ್ರೀನಿವಾಸ ಮಣಗಳ್ಳಿ
ಡಾ.ಡಿ. ಶ್ರೀನಿವಾಸ ಮಣಗಳ್ಳಿ
Next Story
X