Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಬರದ ನಡುವೆಯೂ ಪ್ರವಾಸಿಗರನ್ನು...

ಬರದ ನಡುವೆಯೂ ಪ್ರವಾಸಿಗರನ್ನು ಸೆಳೆಯುತ್ತಿರುವ ಅಯ್ಯನಕೆರೆ

ಕೆ.ಎಲ್.ಶಿವುಕೆ.ಎಲ್.ಶಿವು19 Feb 2024 4:13 PM IST
share
ಬರದ ನಡುವೆಯೂ ಪ್ರವಾಸಿಗರನ್ನು ಸೆಳೆಯುತ್ತಿರುವ ಅಯ್ಯನಕೆರೆ

ಚಿಕ್ಕಮಗಳೂರು, ಫೆ.18: ಹಚ್ಚಹಸಿರಿನ ಮುಗಿಲೆತ್ತರದ ಗಿರಿಶ್ರೀಣಿಗಳು, ಝರಿ ಜಾಲಪಾತಗಳು, ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಅಭಯಾರಣ್ಯ, ದಟ್ಟ ಕಾನನ ಕಾಫಿನಾಡಿನ ಪ್ರವಾಸೋದ್ಯಮದ ಆಕರ್ಷಣೆಯಾಗಿದ್ದು, ಜಿಲ್ಲೆಯ ಬಯಲು ಭಾಗದಲ್ಲಿರುವ ಅಯ್ಯನಕೆರೆ ಬರದ ನಡುವೆಯೂ ನೀರಿನಿಂದ ಮೈದುಂಬಿಕೊಂಡು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ.

ಮಳೆಯ ಕೊರತೆಯಿಂದಾಗಿ ಈ ಬಾರಿ ಚಿಕ್ಕಮಗಳೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರಪೀಡಿತ ತಾಲೂಕೆಂದು ಸರಕಾರ ಘೋಷಣೆ ಮಾಡಿದೆ. ಇದರಲ್ಲಿ ಕಡೂರು ತೀವ್ರ ಬರ ಪೀಡಿತ ತಾಲೂಕಾಗಿದೆ. ಇಂತಹ ತೀವ್ರ ಬರದ ನಡುವೆಯೂ ಕಡೂರು ತಾಲೂಕಿನ ಸಖರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿರುವ ಅಯ್ಯನಕೆರೆ ಮಾತ್ರ ನೀರಿನಿಂದ ಮೈದುಂಬಿ ಕೊಂಡಿರುವುದು ಸೋಜಿಗ, ಆಶ್ಚರ್ಯಕ್ಕೂ ಕಾರಣವಾಗಿದೆ.

ಸಖರಾಯ ಪಟ್ಟಣದಿಂದ 5 ಕಿ.ಮೀ. ರೈತರ ಹೊಲಗದ್ದೆಗಳು, ಅಡಿಕೆ ತೋಟಗಳ ಮಧ್ಯೆ ಸಾಗಿದರೆ ಅಯ್ಯನಕೆರೆ ಸಿಗುತ್ತದೆ. ಸುಮಾರು 100 ಎಕರೆ ಪ್ರದೇಶದಲ್ಲಿ ಕೆರೆ ವ್ಯಾಪಿಸಿದ್ದು, ಬಿರು ಬಿಸಿಲು, ಬರದ ನಡುವೆಯೂ ಈ ಕೆರೆಯಲ್ಲಿ ಇಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಾ ದರೂ ಹೇಗೆಂಬ ಪ್ರಶ್ನೆ ಕೆರೆ ವೀಕ್ಷಣೆ ಮಾಡಿದವರ ಮನದಲ್ಲಿ ಮೂಡುತ್ತದೆ. ಸಖರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲೂ ಈ ಬಾರಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಹೋಬಳಿ ವ್ಯಾಪ್ತಿಯಲ್ಲಿ ತೀವ್ರ ಬರದ ವಾತಾವರಣವಿದೆ.

ಕೆರೆಯ ಹಿಂಭಾಗದಲ್ಲಿ ಗಿರಿಶ್ರೇಣಿಗಳ ಸಾಲಿದ್ದು, ಮಳೆಗಾಲದಲ್ಲಿ ಇಲ್ಲಿನ ಗಿರಿಶ್ರೇಣಿಗಳ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ನೀರು ಅಯ್ಯನಕೆರೆಗೆ ಹರಿದು ಬಂದಿದ್ದು, ಈ ನೀರಿನಿಂದಾಗಿ ಕೆರೆ ಕೋಡಿ ಬಿದ್ದಿದೆ. ಈ ಬಾರಿ ಗಿರಿ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದ ಪರಿಣಾಮ ಕೆರೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದರಿಂದ ಇಂದಿಗೂ ನೀರು ಬತ್ತದೇ ಉಳಿದುಕೊಂಡಿದೆ ಎಂಬುದು ಸ್ಥಳೀಯರ ಹೇಳಿಕೆಯಾಗಿದೆ. ಏನೇ ಆದರೂ ಬರದ ನಾಡಿನಲ್ಲಿ ನೀರಿನ ಕಾರಂಜಿಯಂತೆ ಕಂಗೊಳಿಸುತ್ತ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ ಕೆರೆ.

ಅಯ್ಯನಕೆರೆ ದಂಡೆ ಮೇಲೇರಿ ನಿಂತರೆ ತಂಪಿನ ವಾತಾವರಣ ಮೈಮನಕ್ಕೆ ಮುದ ನೀಡುತ್ತದೆ. ಕೆರೆಯ ಒಂದು ಬದಿಯಲ್ಲಿರುವ ಮುಗಿಲೆತ್ತರದ ಗಿರಿಶ್ರೇಣಿಗಳ ಕಡೆಯಿಂದ ಬೀಸುವ ತಂಪಾದ ಗಾಳಿ ಬಿಸಿಲಧಗೆಯಿಂದ ರೋಸಿಹೋದವರಿಗೆ ಆಹ್ಲಾದ ನೀಡುತ್ತದೆ.

ಇಂತಹ ಅಪೂರ್ವ ರಮಣೀಯ ಪ್ರಾಕೃತಿಕ ಸೊಬಗಿನ ಅಯ್ಯನಕೆರೆ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯ ಪ್ರಮುಖ ಪ್ರವಾಸಿ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಜಿಲ್ಲಾಡಳಿತ ಅಯ್ಯನಕೆರೆಯನ್ನು ಪ್ರವಾಸಿ ಕೇಂದ್ರವನ್ನಾಗಿ ರೂಪಿಸಲು ಅಗತ್ಯ ಮೂಲಸೌಕರ್ಯ ಒದಗಿಸಲು ಮುಂದಾಗಿದೆ. ವಿಶೇಷ ಸಂದರ್ಭಗಳಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ವತಿಯಿಂದ ಈ ಕೆರೆಯಲ್ಲಿ ಬೋಟಿಂಗ್ ವಿಹಾರದ ವ್ಯವಸ್ಥೆಯನ್ನು ಸಾರ್ವಜನಿಕರು, ಪ್ರವಾಸಿಗರಿಗೆ ಕಲ್ಪಿಸುತ್ತಿದ್ದು, ಕೆರೆಯ ಅಭಿವೃದ್ಧಿಗೂ ಸರಕಾರ ಕ್ರಮವಹಿಸುತ್ತಿದೆ. ಕೆರೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಸೇರಿದಂತೆ ಅಭಿವೃದ್ಧಿ, ಮೂಲಸೌಕರ್ಯ ಕಲ್ಪಿಸಲು ಅಯ್ಯನಕೆರೆ ಪ್ರವಾಸಿ ತಾಣ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಶುಲ್ಕ ನಿಗದಿ ಮಾಡಲೂ ಚಿಂತನೆ ನಡೆಸಲಾಗುತ್ತಿದೆ.

ಒಟ್ಟಾರೆ ಬರದ ನಾಡಿನ ನೀರಿನ ಚಿಲುಮೆಯಂತೆ ಅಯ್ಯನಕೆರೆ ಸಖರಾಯಪಟ್ಟಣ ಹೋಬಳಿ ವ್ಯಾಪ್ತಿಯ ಕೃಷಿಗೆ ನೀರೊದಗಿಸುತ್ತಾ ರೈತರ ಜೀವನಾಡಿಯಾಗಿರುವುದಲ್ಲದೇ, ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿಸಲು ಸರಕಾರಗಳು ಈ ಭಾಗದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳೊಂದಿಗೆ ಅಗತ್ಯ ಮೂಲಸೌಕರ್ಯಗಳನ್ನೂ ಒದಗಿಸಬೇಕೆಂಬುದು ಪರಿಸರ ಪ್ರೇಮಿಗಳು ಆಗ್ರಹವಾಗಿದೆ.

ಚಿಕ್ಕಮಗಳೂರು ನಗರದಿಂದ 28ಕಿಮೀ ದೂರದ ಸಖರಾಯಪಟ್ಟಣ ಹೋಬಳಿ ಕೇಂದ್ರದಿಂದ ಕೇವಲ 5ಕಿಮೀ ದೂರದಲ್ಲಿರುವ ಅಯ್ಯನಕೆರೆ ಬರದ ಬೇಗೆಯಲ್ಲೂ ನೀರಿನಿಂದ ಮೈದುಂಬಿಕೊಂಡಿದೆ. ಈ ಕೆರೆ ಸಖರಾಯಪಟ್ಟಣ ಹೋಬಳಿ ವ್ಯಾಪ್ತಿಯ ರೈತರ ಜೀವನಾಡಿಯಾಗಿರುವುದು ಒಂದೆಡೆಯಾದರೆ, ಹಸಿರು ಹೊದ್ದು ಮಲಗಿರುವ ಗಿರಿಶ್ರೇಣಿಗಳ ಮಧ್ಯೆ ವಿಶಾಲವಾದ ಪ್ರದೇಶದಲ್ಲಿ ಪವಡಿಸಿಕೊಂಡಿರುವ ಅಯ್ಯನಕೆರೆ ನೋಡಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.

share
ಕೆ.ಎಲ್.ಶಿವು
ಕೆ.ಎಲ್.ಶಿವು
Next Story
X