Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ನಂಜನಗೂಡು | ಹೊಸ ವೀಡುಹುಂಡಿ ಸರಕಾರಿ...

ನಂಜನಗೂಡು | ಹೊಸ ವೀಡುಹುಂಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಶಸ್ತಿಯ ಗರಿ

‘ಪುಷ್ಠಿ’ ಗೌರವದೊಂದಿಗೆ 1ಲಕ್ಷ ರೂ. ಬಹುಮಾನ

ನೇರಳೆ ಸತೀಶ್ ಕುಮಾರ್ನೇರಳೆ ಸತೀಶ್ ಕುಮಾರ್7 April 2025 10:48 AM IST
share
ನಂಜನಗೂಡು | ಹೊಸ ವೀಡುಹುಂಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪ್ರಶಸ್ತಿಯ ಗರಿ

ಮೈಸೂರು : ರಾಜ್ಯ ಸರಕಾರ ಶಾಲಾ ಶಿಕ್ಷಣ ಇಲಾಖೆಯಿಂದ ಅತ್ಯುತ್ತಮ ಶಾಲಾ ನಿರ್ವಹಣೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಸಂಬಂಧಿಸಿ ಸಮೀಕ್ಷೆ ನಡೆಸಿ ನಂಜನಗೂಡು ತಾಲೂಕಿನ ಏಕೈಕ ಹೊಸ ವೀಡುಹುಂಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸರಕಾರ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ 1 ಲಕ್ಷ ರೂ. ನಗದು ಬಹುಮಾನ ಮತ್ತು ಪುಷ್ಠಿ ಗೌರವವನ್ನು ನೀಡಿ ಅಭಿನಂದಿಸಿದೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ಒಳಗೊಂಡಂತೆ 44,762 ಶಾಲೆಗಳು ವಿದ್ಯಾ ವಾಹಿನಿ ಪೋರ್ಟಲ್‌ನಲ್ಲಿ ಎಸ್‌ಡಿಎಂಸಿ ಸಮೀಕ್ಷೆಗೆ ಪಾಲ್ಗೊಳ್ಳುವ ಮೂಲಕ ಕ್ಲಸ್ಟರ್ ಹಂತದಿಂದ ತಾಲೂಕು ಹಂತಕ್ಕೆ 1,836 ಶಾಲೆಗಳು ಹಾಗೂ ತಾಲೂಕು ಹಂತದಿಂದ 612 ಶಾಲೆಗಳು ಜಿಲ್ಲಾ ಹಂತದವರೆಗಿನ ಮೌಲ್ಯಮಾಪನದಲ್ಲಿ ತೊಡಗಿಸಿಕೊಂಡಿದ್ದು, ಇದರಲ್ಲಿ 204 ಶಾಲೆಗಳು ಪ್ರತಿ ತಾಲೂಕಿಗೆ ಒಂದರಂತೆ ವಿದ್ಯಾ ವಾಹಿನಿ ಪೋರ್ಟಲ್ ಮೂಲಕ ಆಯ್ಕೆಗೊಂಡಿದ್ದು, ಈ 204 ಶಾಲೆಗಳಲ್ಲಿ ಹೊಸ ವೀಡುಹುಂಡಿ ಎಂಬ ಪುಟ್ಟ ಶಾಲೆ ಆಯ್ಕೆಯಾಗಿ ಒಂದು ಲಕ್ಷ ರೂ. ನಗದು ಬಹುಮಾನ ಪಡೆಯುವ ಮೂಲಕ ನಂಜನಗೂಡು ತಾಲೂಕಿನ ಇತರ ಶಾಲೆಗಳಿಗೆ ಮಾದರಿಯಾಗಿದೆ.

ಕ್ಷೇತ್ರ ಸಮನ್ವಯಾಧಿಕಾರಿ ಬಾಲರಾಜ್ ಮಾತನಾಡಿ, ರಾಜ್ಯದ ಪುಷ್ಠಿ ಕಾರ್ಯಕ್ರಮದಡಿ ನಮ್ಮ ನಂಜನಗೂಡು ಶಾಲೆಯಲ್ಲಿ ಈ ಹೊಸ ವೀಡು ಹುಂಡಿ ಶಾಲೆಗೆ ಅನೇಕ ಬಾರಿ ಭೇಟಿ ನೀಡಿದಾಗ ಮಕ್ಕಳ ಕಲಿಕೆ ವಾತಾವರಣ ತುಂಬಾ ಚೆನ್ನಾಗಿದೆ. ಶಾಲೆ ಹಸಿರು ಪರಿಸರದೊಂದಿಗೆ ಕಂಗೊಳಿಸುತ್ತಿದ್ದು ಈ ಶಾಲೆಗೆ ದಾನಿಗಳು ನೆರವಿನ ಮಹಾಪೂರವನ್ನೇ ಹರಿಸಿದ್ದು ಸುಮಾರು 3ಸಾವಿರ ಪುಸ್ತಕಗಳು, ಸ್ಮಾರ್ಟ್ ಟಿವಿ, ನಲಿ ಕಲಿ ಟೇಬಲ್, ಶಾಲೆಗೆ ಪೈಂಟ್ಸ್ ಮಾಡಿಸಿರುವುದು ನಮ್ಮ ಗಮನಕ್ಕೆ ಬಂದು ಶಾಲೆಯಲ್ಲಿ ಎಸ್‌ಡಿಎಂಸಿ ಅವರ ಸಹಕಾರ ತುಂಬಾ ಇದ್ದು ಈ ಶಾಲೆಗೆ ಪ್ರಶಸ್ತಿ ಬಂದಿರುವುದು ನನಗೆ ತುಂಬಾ ಸಂತೋಷವಾಗಿದೆ ಎಂದು ತಿಳಿಸಿದ್ದಾರೆ.

ಸಿ.ಆರ್.ಪಿ. ಶಿವನಾಗ ಮಾತನಾಡಿ, ಪುಷ್ಠಿ ಕಾರ್ಯಕ್ರಮದಡಿ ಉತ್ತಮ ಎಸ್‌ಡಿಎಂಸಿ ಶಾಲೆ ಎಂದು ಹೆಸರು ಪಡೆದಿರುವ ಈ ಶಾಲೆಯು ಶೈಕ್ಷಣಿಕವಾಗಿ ಗುಣಮಟ್ಟವನ್ನು ಹೊಂದಿರುವ ಶಾಲೆಯಾಗಿದ್ದು ಬಿಸಿಊಟ ನಿರ್ವಹಣೆಯಲ್ಲಿಯೂ ಅತ್ಯುತ್ತಮವಾಗಿದೆ. ಶಾಲೆ ಸರ್ವಾಂಗೀಣ ಅಭಿವೃದ್ಧಿ ಹೊಂದಿದ್ದು ಈ ಶಾಲೆಗೆ ಈಗಾಗಲೇ ಸರಕಾರದಿಂದ ಕಂಪ್ಯೂಟರ್, ಸ್ಮಾರ್ಟ್ ಟಿವಿ ಎಲ್ಲ ಬಂದಿದ್ದು ಇದರ ಸದುಪಯೋಗವನ್ನು ಪಡಿಸಿಕೊಂಡು ಸ್ಥಳೀಯರು ಹಾಗೂ ಪೋಷಕರು ಮಕ್ಕಳ ದಾಖಲಾತಿಯನ್ನು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹೊಸವೀಡು ಹುಂಡಿ ಶಾಲೆಯು ಚಿಕ್ಕದಾದರೂ ತುಂಬಾ ಸುಂದರವಾಗಿರುವ ಶಾಲೆಯಾಗಿದ್ದು, ಈ ಶಾಲೆಗೆ ಪ್ರಶಸ್ತಿ ಬಂದಿರುವುದು ಶ್ಲಾಘನೀಯ. ಶಾಲಾ ಶೈಕ್ಷಣಿಕ ಗುಣಮಟ್ಟ ಕಾಪಾಡಿಕೊಂಡು ಈ ಶಾಲೆ ಇಲಾಖೆಯ ಕಾರ್ಯ ಎಸ್‌ಡಿಎಂಸಿ ನಿರ್ವಹಣೆಯಲ್ಲಿ ಉತ್ತಮವಾಗಿದ್ದು ಈ ಶಾಲೆಯ ಮುಖ್ಯ ಶಿಕ್ಷಕ ಹನುಮಂತರಾಜು ಹಾಗೂ ಶಿಕ್ಷಕ ನಾಗೇಶ.ಪಿ ಅವರ ಶ್ರಮ, ಉತ್ತಮ ಕಲಿಕೆಯ ವಾತಾವರಣದಿಂದ ಶಾಲೆಗೆ ಪ್ರಶಸ್ತಿ ಬಂದಿರುವುದು ನನಗೆ ಹೆಮ್ಮೆ ತಂದಿದೆ.

-ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ನಂಜನಗೂಡು

ಹೊಸ ವೀಡುಹುಂಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸರಕಾರ ಶಾಲಾ ಶಿಕ್ಷಣ ಇಲಾಖೆ ಸಮಗ್ರ ಶಿಕ್ಷಣ ಕರ್ನಾಟಕ 1 ಲಕ್ಷ ರೂ. ನಗದು ಬಹುಮಾನ ಮತ್ತು ಪುಷ್ಠಿ ಗೌರವ ಸಂಪೂರ್ಣವಾಗಿ ಹೊಸ ವೀಡುಹುಂಡಿ ಗ್ರಾಮದವರಿಗೆ ಸಲ್ಲಬೇಕು. ಗ್ರಾಮಸ್ಥರ ಸಹಕಾರದಿಂದ ರಾಜ್ಯ ಸರಕಾರದ ಪ್ರಶಸ್ತಿ ಲಭಿಸಿದೆ. 1ಲಕ್ಷ ರೂ.ಗಳಲ್ಲಿ ಶಾಲೆಗೆ ಪ್ರಿಂಟರ್, ಇನ್ವರ್ಟರ್, ವಾಟರ್ ಪ್ಯೂರಿಫೈ, ಗ್ರಂಥಾಲಯಕ್ಕೆ ರ್ಯಾಕ್, ನಲಿಕಲಿ ಕುರ್ಚಿ, ಟೇಬಲ್, ತರಗತಿಗೆ ಡೆಸ್ಕ್‌ಗಳನ್ನು ಖರೀದಿ ಮಾಡಿ ಶಾಲಾ ದಾಖಲಾತಿ ಹೆಚ್ಚಳ ಮಾಡಲು ಪ್ರಯತ್ನಿಸುತ್ತೇವೆ.

-ಹನುಮಂತರಾಜು, ಮುಖ್ಯ ಶಿಕ್ಷಕ, ಹೊಸ ವೀಡುಹುಂಡಿ, ನಂಜನಗೂಡು

ನಮ್ಮ ಶಾಲೆ ಒಂದು ಕಾಲದಲ್ಲಿ ಇಡೀ ನಂಜನಗೂಡಿನಲ್ಲಿಯೇ ಹಲವು ಮೂಲಸೌಲಭ್ಯ ವಂಚಿತ ಹೊಂದಿದ್ದ ಶಾಲೆಯಾಗಿದ್ದು, ಈ ಶಾಲೆಗೆ ಹೊಸ ದಾಗಿ ಬಂದ ಮುಖ್ಯ ಶಿಕ್ಷಕ ಹನುಮಂತರಾಜು ಹಾಗೂ ಸಹ ಶಿಕ್ಷಕ ನಾಗೇಶ.ಪಿ ಅವರ ಕಾರ್ಯಕ್ಷಮತೆ, ಗ್ರಾಮಸ್ಥರೊಂದಿಗಿನ ಒಡನಾಟ, ಉತ್ತಮ ಚಟುವಟಿಕೆಗಳಿಂದ ಉತ್ತಮ ಶಾಲೆ ಎಂದು ಹೆಸರು ಬರಲು ಕಾರಣವಾಗಿದೆ.

-ಕಿರಣ್ ಮೌರ್ಯ, ಹಳೆಯ ವಿದ್ಯಾರ್ಥಿ, ಹೊಸ ವೀಡಹುಂಡಿ ಶಾಲೆ

share
ನೇರಳೆ ಸತೀಶ್ ಕುಮಾರ್
ನೇರಳೆ ಸತೀಶ್ ಕುಮಾರ್
Next Story
X