Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ...

ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಕಾಫಿನಾಡಿನ ಕಬಡ್ಡಿ ಕ್ರೀಡಾಪಟು ಸಿಂಧು

ಕೆ.ಎಲ್.ಶಿವುಕೆ.ಎಲ್.ಶಿವು24 March 2025 1:49 PM IST
share
ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ಕಾಫಿನಾಡಿನ ಕಬಡ್ಡಿ ಕ್ರೀಡಾಪಟು ಸಿಂಧು

ಚಿಕ್ಕಮಗಳೂರು, ಮಾ.23: ಕಾಫಿನಾಡಿನ ಕುಗ್ರಾಮದ, ಕೂಲಿ ಕಾರ್ಮಿಕ ಕುಟುಂಬದ ಯುವತಿಯೊಬ್ಬಳು ಜಿಲ್ಲೆ, ರಾಜ್ಯ, ರಾಷ್ಟ್ರಮಟ್ಟದ ಕಬಡ್ಡಿ ಟೂರ್ನಮೆಂಟ್‌ಗಳಲ್ಲಿ ತನ್ನದೇಯಾದ ಛಾಪು ಮೂಡಿಸುತ್ತಿದ್ದು, ಪ್ರತಿಭಾವಂತ ಕ್ರೀಡಾಪಟುವಾಗಿ ಹೊರಹೊಮ್ಮುತ್ತಿದ್ದಾಳೆ.

ಚಿಕ್ಕಮಗಳೂರು ತಾಲೂಕಿನ ಬಾಬಾ ಬುಡಾನ್‌ಗಿರಿ ಸಮೀಪದ ಮಹಲ್ ಗ್ರಾಮದ ನಿವಾಸಿಗಳಾದ ಹಾಗೂ ಕಾಫಿ ತೋಟದಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ನೀಲಾ ಹಾಗೂ ಈಶ್ವರ್ ದಂಪತಿಯ ಪುತ್ರಿ ಸಿಂಧು ಕಬಡ್ಡಿ ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರಮಟ್ಟದಲ್ಲಿ ಛಾಪು ಮೂಡಿಸುತ್ತಿರುವ ಗ್ರಾಮೀಣ ಪ್ರತಿಭೆ. ತನ್ನ ಪೋಷಕರ ನಾಲ್ವರು ಹೆಣ್ಣು ಮಕ್ಕಳ ಪೈಕಿ ಓರ್ವಳಾದ ಸಿಂಧು ಈಶ್ವರ್ ಸದ್ಯ ನಗರದ ಎಸ್‌ಟಿಜೆ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿರುವ ಬಹುಮುಖ ಪ್ರತಿಭೆ. ಶಾಲಾ ದಿನಗಳಲ್ಲೇ ಕಬಡ್ಡಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದ ಸಿಂಧು ಹಲವಾರು ಪ್ರಶಸ್ತಿ, ಬಹುಮಾನ ಪಡೆಯುವ ಮೂಲಕ ಎಲ್ಲರ ಗಮನ ಸೆಳೆದಿದ್ದಳು.

ನಗರದ ಕ್ರೀಡಾ ತರಬೇತುದಾರರಾದ ಎಂ.ಡಿ.ಕುಮಾರ್ ಹಾಗೂ ಮಂಜುನಾಥ್ ರಾಜ್ ಅರಸ್ ಅವರ ಗರಡಿಯಲ್ಲಿ ಕಬಡ್ಡಿ ತರಬೇತಿ ಪಡೆಯುತ್ತಿರುವ ಸಿಂಧು, ರಾಷ್ಟ್ರಮಟ್ಟದ ಕ್ರೀಡಾ ತರಬೇತಿಯಲ್ಲೂ ಭಾಗವಹಿಸಿ ಕಬಡ್ಡಿ ಆಟವನ್ನು ಕರಗತ ಮಾಡಿಕೊಂಡಿದ್ದಾಳೆ. 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆಯೇ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ವತಿಯಿಂದ ಸಬ್ ಜೂನಿಯರ್ ಕಬಡ್ಡಿ ವಿಭಾಗದಲ್ಲಿ ಕರ್ನಾಟಕ ಮಹಿಳಾ ತಂಡಕ್ಕೆ ಆಯ್ಕೆಯಾಗಿ ಬಿಹಾರ ರಾಜ್ಯದ ಪಾಟ್ನಾದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಟೂರ್ನ್‌ಮೆಂಟ್‌ನಲ್ಲಿ ಭಾಗವಹಿಸಿ ತನ್ನ ಆಟದಿಂದ ಆಯ್ಕೆಗಾರರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಳು.

10ನೇ ತರಗತಿಯಲ್ಲಿದ್ದ ವೇಳೆ ಸ್ಕೂಲ್ ಮೀಟ್ ಸ್ಪೋರ್ಟ್ಸ್‌ನಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಭಾಗವಹಿಸಿ ಮಂಡ್ಯದಲ್ಲಿ ನಡೆದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದಳು. ಪದವಿ ಹಂತದಲ್ಲಿ ಕುವೆಂಪು ವಿವಿ ಕಬಡ್ಡಿ ತಂಡಕ್ಕೆ ಆಯ್ಕೆಯಾಗುವ ಮೂಲಕ ತಮಿಳುನಾಡು ರಾಜ್ಯದಲ್ಲಿ ನಡೆದ ಅಂತರ್ ಕಾಲೇಜು ಕಬಡ್ಡಿ ಕ್ರೀಡಾಕೂಟದಲ್ಲಿ ಭಾಗವಹಿಸಿ ತನ್ನ ತಂಡ ಬಹುಮಾನ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾಳೆ. ಅಲ್ಲದೇ ದಕ್ಷಿಣ ಭಾರತ ಅಂತರ್ ವಿವಿ ಕಬಡ್ಡಿ ಟೂರ್ನ್‌ಮೆಂಟ್‌ಗಳಲ್ಲೂ ಭಾಗವಹಿಸಿ ಕುವೆಂಪು ವಿವಿ ತಂಡದ ನಾಯಕಿಯಾಗಿ ಬಹುಮಾನ ಗೆಲ್ಲುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾಳೆ.

2025, ಫೆಬ್ರವರಿಯಲ್ಲಿ ಹರಿಯಾಣ ರಾಜ್ಯದಲ್ಲಿ ನಡೆದ ರಾಷ್ಟ್ರಮಟ್ಟದ ಸೀನಿಯರ್ ಮಹಿಳಾ ಕಬಡ್ಡಿ ಕ್ರೀಡಾಕೂಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಸಿಂಧು ಈ ಕ್ರೀಡಾ ಕೂಟದಲ್ಲೂ ಗಮನಾರ್ಹ ಸಾಧನೆ ಮಾಡಿದ್ದಾಳೆ. ಪ್ರತೀ ವರ್ಷ ನಡೆಯುವ ದಸರಾ ಕ್ರೀಡಾಕೂಟದಲ್ಲೂ ಸಿಂಧು ಬಿಸಿಆರ್ ಅಕಾಡಮಿಯಿಂದ ಪ್ರತಿನಿಧಿಸಿ ಸಾಧನೆ ಮಾಡುತ್ತಿದ್ದು, ಈ ಅಕಾಡಮಿಯಿಂದಲೇ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವಾರು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾಳೆ.

ಕಬಡ್ಡಿ ಕ್ರೀಡೆಯಲ್ಲಿ ಸಿಂಧು ಅಪಾರ ಪ್ರತಿಭೆ ಹೊಂದಿದ್ದು, ಎಸ್‌ಟಿಜೆ ಕಾಲೇಜಿನ ಆಡಳಿತ ಮಂಡಳಿ ಆಕೆಯ ಪ್ರತಿಭೆಯನ್ನು ಸದಾ ಪ್ರೋತ್ಸಾಹಿಸುತ್ತಾ ಬಂದಿದೆ. ಕಾಲೇಜಿನ ಪ್ರಾಂಶುಪಾಲೆ ಭಾರತಿ ಕಬಡ್ಡಿ ಆಟಕ್ಕೆ ಅಗತ್ಯವಾಗಿರುವ ತರಬೇತಿ, ಕ್ರೀಡಾ ಸಾಮಗ್ರಿ ಸೇರಿದಂತೆ ಸಿಂಧುಳನ್ನು ರಾಷ್ಟ್ರ, ಅಂತರ್‌ರಾಷ್ಟ್ರೀಯ ಮಟ್ಟದ ಕಬಡ್ಡಿ ಕ್ರೀಡಾಪಟುವನ್ನಾಗಿಸಲು ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ. ಇದರೊಂದಿಗೆ ತರಬೇತುದಾರರಾದ ರಮೇಶ್ ಹಾಗೂ ಮಂಜುನಾಥ್ ರಾಜ್ ಅರಸ್ ಅವರ ತರಬೇತಿ ಸಿಂಧು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವಂತಾಗಿದ್ದು, ಕಾಫಿನಾಡಿನ ಕುಗ್ರಾಮದ ಈ ಕಬಡ್ಡಿ ಪ್ರತಿಭೆ ಅಂತರ್‌ರಾಷ್ಟ್ರೀಯ ಮಟ್ಟದ ಪ್ರತಿಭಾವಂತ ಕ್ರೀಡಾಪಟು ಆಗಿ ಹೊರಹೊಮ್ಮಲಿ ಎಂದು ಕಾಫಿನಾಡಿನ ಕಬಡ್ಡಿ ಕ್ರೀಡಾ ಪ್ರೇಮಿಗಳು ಹಾಗೂ ಸಾರ್ವಜನಿಕರು ಹಾರೈಸುತ್ತಿದ್ದಾರೆ.

share
ಕೆ.ಎಲ್.ಶಿವು
ಕೆ.ಎಲ್.ಶಿವು
Next Story
X