ರಾಯಚೂರು: ಬಾವಿಗೆ ಬಿದ್ದು ತಾಯಿ, ಮಗ ಮೃತ್ಯು
ರಾಯಚೂರು: ತಾಯಿ, ಮಗ ಇಬ್ಬರೂ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಕೆ. ಸಂಜು, ತಾಯಿ ರಾಧಮ್ಮ ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳೀಯರು ಇಬ್ಬರ ಮೃತದೇಹವನ್ನು ಬಾವಿಯಿಂದ ಹೊರ ತೆಗೆದಿದ್ದಾರೆ.
Next Story