ಮರಕ್ಕೆ ಕಟ್ಟಿ ಸಾರ್ವಜನಿಕವಾಗಿ ಮಹಿಳೆ ಮೇಲೆ ಹಲ್ಲೆ ; ರಾಯಚೂರಿನಲ್ಲಿ ನಡೆದ ಅಮಾನವೀಯ ಘಟನೆ

ರಾಯಚೂರು: ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಅಮಾನವೀಯ ಘಟನೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ದಂಡಮ್ಮ ಎಂಬವರ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ. ದಂಡಮ್ಮ ತನ್ನ ತಾಯಿಯೊಂದಿಗೆ ಜಾಲಹಳ್ಳಿಯಲ್ಲಿ ವಾಸವಾಗಿದ್ದರು.
ಇತ್ತೀಚೆಗೆ ಮೃತಪಟ್ಟ ದುರ್ಗಪ್ಪ ಎಂಬವರ ಸಾವಿಗೆ ದಂಡಮ್ಮ ಕಾರಣ ಎಂದು ಆರೋಪಿಸಿ ಮೃತನ ಸಹೋದರ ಬಸವರಾಜ ನಾಯಕ ಹಾಗೂ ಕೆಲ ಸಂಬಂಧಿಕರು ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗ್ರಾಮದ ನಿವಾಸಿಗಳು ಸುತ್ತುವರೆದು ನೋಡುತ್ತಿದ್ದರೂ ಯಾರು ಸಹಾಯಕ್ಕೆ ಬರಲಿಲ್ಲ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಮಹಿಳೆ ಈಗ ದೇವದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಲ್ಲೆಯ ವಿಡಿಯೋ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಸಂಬಂಧ ನಾಲ್ವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.
Next Story