ವೈದ್ಯರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಣೆಗೆ ಅನುಕೂಲ ಮಾಡಲು ಒತ್ತಾಯ; ಸರ್ಕಾರಿ ನೌಕರರಿಂದ ಮನವಿ
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದು ನಿರ್ಭೀತಿಯಿಂದ ಕೆಲಸ ಮಾಡಲು ಸಹಕರಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದೇವದುರ್ಗ ತಾಲೂಕು ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ, ಕಿರುಕುಳ ಹೆಚ್ಚಾಗುತ್ತಿದೆ. ಕೂಡಲೇ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಹಾಗೂ ರಕ್ಷಣೆ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣ ಶಾವಂತಗೇರಾ, ಕಾರ್ಯದರ್ಶಿ ಭೀಮೇಶ ನಾಯಕ, ತಾಲುಕು ಅಧ್ಯಕ್ಷ ಹನುಮಂತ್ರಯ, ರಾಜ್ಯ ಪರಿಷತ್ ಸದಸ್ಯ ಶರಣಬಸವ, ಮಹಾದೇವ ಪಾಟೀಲ್, ನಿರ್ದೇಶಕ ಅಣ್ಣಾರಾವ್, ಅಭಿಷೇಕ್ ಹುಡೆದ್, ನಾಗರೆಡ್ಡಿ, ಮಲ್ಲಿಕಾರ್ಜುನ ಉಪಸ್ಥಿತರಿದ್ದರು.
Next Story