ಪಕ್ಷ ಮುನ್ನಡೆಸಲು ಮತ್ತೊಮ್ಮೆ ಅವಕಾಶ ಸಿಗುವ ವಿಶ್ವಾಸವಿದೆ : ಬಿ.ವೈ.ವಿಜಯೇಂದ್ರ

ಬಿ.ವೈ.ವಿಜಯೇಂದ್ರ
ರಾಯಚೂರು : ಹಿರಿಯರ ಆಶೀರ್ವಾದದಿಂದ ನನಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದೆ. ನನ್ನ ಮೇಲೆ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದ್ದೇನೆ, ಹಿರಿಯರು ಮತ್ತೊಮ್ಮೆ ಅವಕಾಶ ನೀಡಿ ಪಕ್ಷ ಮುನ್ನಡೆಸಲು ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಮಾನ್ವಿ ಪಟ್ಟಣದಲ್ಲಿ ಕೆಎಸ್ಎನ್ ಸೇವಾ ಸಮಿತಿಯಿಂದ ಆಯೋಜಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದಾಗ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಬಿಜೆಪಿಯು ಆಂತರಿಕ ಪ್ರಜಾಪ್ರಭುತ್ವ ಇರುವಂತಹ ರಾಜಕೀಯ ಪಕ್ಷ. ಪಕ್ಷದ ಹಿರಿಯರು ಆಶಿರ್ವಾದ ಮಾಡಿ ಜವಾಬ್ದಾರಿ ಕೊಟ್ಟಿದ್ದಾರೆ. ಕಳೆದೊಂದು ವರ್ಷದಿಂದ ಯಶಸ್ವಿಯಾಗಿ ನಿರ್ವಹಿಸಿಕೊಂಡು ಬಂದಿದ್ದೇನೆ. ಹಿರಿಯರು ಮತ್ತೊಮ್ಮೆ ಅವಕಾಶ ಕೊಡುತ್ತಾರೆ ಎನ್ನುವ ವಿಶ್ವಾಸ ನನಗಿದೆ. ಮತ್ತೊಮ್ಮೆ ಎಲ್ಲರನ್ನು ಒಗ್ಗೂಡಿಸಿಕೊಂಡು ಕೆಲಸ ಮಾಡುವ ಅವಕಾಶ ಸಿಗುತ್ತೆʼ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Next Story