ಕರ್ನಾಟಕ ರಾಜ್ಯೋತ್ಸವ: ರಾಯಚೂರಿನಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ ಧ್ವಜಾರೋಹಣ
ರಾಯಚೂರು: ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಕರ್ನಾಟಕ ಸಂಘದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರು ನಾಡದೇವತೆ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಬಳಿಕ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಶಾಸಕರಾದ ಬಸವನಗೌಡ ತುರ್ವಿಹಾಳ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ರಾಯಚೂರು ನಗರಸಭೆಯ ಅಧ್ಯಕ್ಷೆ ನರಸಮ್ಮ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ, ರಾಯಚೂರು ಉಪ ವಿಭಾಗೀಯ ಅಧಿಕಾರಿ ಗಜಾನನ ಬಾಳೆ, ತಹಶೀಲ್ದಾರ್ ಸುರೇಶ ವರ್ಮ,ಕರ್ನಾಟಕ ಸಂಘದ ಅಧ್ಯಕ್ಷ ಕೆ ಶಾಂತಪ್ಪ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕಾಳಪ್ಪ ಬಡಿಗೇರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಕನ್ನಡಾಭಿಮಾನಗಳು ಪಾಲ್ಗೊಂಡಿದ್ದರು.
Next Story