ಲಿಂಗಸುಗೂರು | ಪಿಯು ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಶಂಕೆ ; ನಕಲು ಮಾಡಲು ಪೋಷಕರಿಂದಲೇ ನೆರವು ಆರೋಪ

ಸಾಂದರ್ಭಿಕ ಚಿತ್ರ
ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಲವು ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ದ್ವಿತೀಯ ಪಿಯು ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಬಹುತೇಕ ಪ್ರಶ್ನೆಗಳು ಸೋರಿಕೆಯಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಸೋಮವಾರ ನಿಗದಿಯಾಗಿದ್ದ ಗಣಿತ ಪರೀಕ್ಷೆಯ ಸುಮಾರು 70 ಅಂಕದ ಪ್ರಶ್ನೆಗಳು ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಸೋರಿಕೆಯಾಗಿದ್ದು, ಜೆರಾಕ್ಸ್ ಅಂಗಡಿಗಳಲ್ಲಿ ಮೈಕ್ರೋ ಜೆರಾಕ್ಸ್ ಮೂಲಕ ಅನೇಕ ವಿದ್ಯಾರ್ಥಿಗಳು ನಕಲು ಮಾಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಹಿತಿ ತಿಳಿಯುತ್ತಿದ್ದಂತೆ ಪೋಷಕರು ತಮ್ಮ ಮಕ್ಕಳಿಗೆ ಉತ್ತರಗಳನ್ನು ನೀಡಿ ನಕಲು ಮಾಡಲು ಸಹಕಾರ ನೀಡಿದ್ದಾರೆ ಎಂದು ಹೇಳಲಾಗಿದೆ.
ಪ್ರಶ್ನೆಗಳನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿ ಅಥವಾ ವಿದ್ಯಾರ್ಥಿಗಳು ಮೊಬೈಲ್ ಮೂಲಕ ಸೋರಿಕೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
Next Story