ರಾಯಚೂರು ಜಿಲ್ಲೆಯ ಕೈಗಾರಿಕಾ ಸಮಸ್ಯೆಗಳ ಕುರಿತು ಸಚಿವರ ಜತೆ ಸಭೆ

ರಾಯಚೂರು : ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಕಾಮಗಾರಿ, ಹೊಸ ಕೈಗಾರಿಕೆ ಗಳಿಗೆ ಭೂ ಲಭ್ಯತೆ ಹಾಗೂ ಕೈಗಾರಿಕಾ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಿಲ್ಲೆಯ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆಯ ಸಚಿವ ಎಂ.ಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ಜ.16ರಂದು ಬೆಂಗಳೂರಿನ ವಿಧಾನಸೌಧದ 3ನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಸಭೆ ನಡೆಯಿತು.
ವಿಮಾನ ನಿಲ್ದಾಣದ ಅಭಿವೃದ್ಧಿ, ಹೊಸ ಕೈಗಾರಿಕೆಗಳಿಗೆ ಭೂಸ್ವಾಧೀನ ಮತ್ತು ಕೈಗಾರಿಕಾ ವಿನ್ಯಾಸದಲ್ಲಿ ವಸತಿಗಳ ಆನ್ ಲೈನ್ ಮಾರಾಟ ಸಮಸ್ಯೆ ಬಗೆಹರಿಸಲು ತ್ವರಿತಗತಿಯಲ್ಲಿ ಮುಂದಾಗುವಂತೆ ಸಚಿವರು ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಕೆ., ರಾಯಚೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಅಧ್ಯಕ್ಷ, ಎಸ್. ಕಮಲ್ ಕುಮಾರ್, ಜಂಟಿ ಕಾರ್ಯದರ್ಶಿ ಲಕ್ಷ್ಮಿ ರೆಡ್ಡಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಸವರಾಜ್, ಮುಖಂಡರಾದ ರವಿ ಬೋಸರಾಜು, ಸಾಜಿದ್ ಸಮೀರ್, ಮುಹಮ್ಮದ್ ಶಾಲಂ ಭಾಗವಹಿಸಿದ್ದರು.
Next Story