ರಾಯಚೂರು | ಎ.30ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರಷ್ಟು ರಿಯಾಯಿತಿ : ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೋಹಪಾತ್ರ

ಜುಬಿನ್ ಮೋಹಪಾತ್ರ
ರಾಯಚೂರು : ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಸಂಬಂಧಿಸಿ 2025–26ನೇ ಸಾಲಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಯನ್ನು ಎ.30ರೊಳಗೆ ಪಾವತಿಸಿದರೆ ಶೇ.5ರಷ್ಟು ರಿಯಾಯಿತಿಯ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೋಹಪಾತ್ರ ತಿಳಿಸಿದ್ದಾರೆ.
ನಗರದ ಎಲ್ಲಾ ಆಸ್ತಿ ಮಾಲೀ-ಕರು ಈ ರಿಯಾಯಿತಿಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ತಮ್ಮ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಮಾಲಕರು ಆಸ್ತಿ ತೆರಿಗೆಯನ್ನು ಪಾವತಿಸಿದ್ದಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಆಸ್ತಿ ತೆರಿಗೆ ಮೇಲೆ ಶೇ. 5%ರಷ್ಟು ರಿಯಾಯಿತಿಯನ್ನು ನೀಡಲಾಗುವುದು. ಈ ಅವಕಾಶವನ್ನು ಬಳಸಿ, ಆಸ್ತಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸುವಂತೆ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
Next Story