ರಾಯಚೂರು | ವಿವಿಧ ತಜ್ಞ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಯಚೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಿಲ್ಲೆಯ ಅಧೀನದಲ್ಲಿ ಬರುವ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳು, ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಅನುಮೋದಿಸಿರುವ ವಿವಿಧ ವೃಂದದ ತಜ್ಞ ವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕಾರ್ಯಕ್ರಮದಡಿ ಸೃಜಿಸಿರುವ ಹುದ್ದೆಗಳಿಗೆ ಜ.16ರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 5.30ಗಂಟೆಯವರೆಗೆ ನೇರ ಸಂದರ್ಶನವನ್ನು ಫುಲ್ ಟೈಮ್, ಪಾರ್ಟ್ ಟೈಮ್ ಅಥವಾ ಆನ್ ಸೆಲ್ ಬೇಸಿಸ್ ಮೇಲೆ ನೇರ ಸಂದರ್ಶನವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಂಗಣ ರಾಯಚೂರಿನಲ್ಲಿ ಹಮ್ಮಿಕೊಂಡಿದ್ದು ಆಸಕ್ತಿಯುಳ್ಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕವನ್ನು ನೋಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.