ರಾಯಚೂರು | ಗ್ಯಾಸ್ ಸಿಲಿಂಡರ್ ಸ್ಫೋಟ; ಗುಡಿಸಲು ಬೆಂಕಿಗಾಹುತಿ, 5 ಕುರಿಗಳು ಸಜೀವ ದಹನ

ರಾಯಚೂರು: ರಾಯಚೂರು ತಾಲೂಕಿನ ಏಗನೂರು ಗ್ರಾಮದಲ್ಲಿ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಬೆಂಕಿಗಾಹುತಿಯಾಗಿದ್ದು, 5 ಕುರಿಗಳು ಸಜೀವ ದಹನವಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಏಗನೂರು ಗ್ರಾಮದ ನರಸಿಂಹಲು ಎಂಬುವವರ ಗುಡಿಸಲಿನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ.
ಘಟನೆ ಸಂಬಂಧ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ ಬೆಂಕಿ ನಂದಿಸಿದ್ದಾರೆ.
ಬೆಂಕಿ ಅವಘಡದಲ್ಲಿ ಮನೆಯಲ್ಲಿದ್ದ ನಗದು, ದವಸಧಾನ್ಯ ಮತ್ತು ಚಿನ್ನದ ಕಿವಿಯೋಲೆ ಸಹಿತ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿದೆ ಎನ್ನಲಾಗಿದೆ. ಅಲ್ಲದೆ, ಗುಡಿಸಲಿನ ಪಕ್ಕದಲ್ಲಿ ಕಟ್ಟಿಹಾಕಿದ್ದ ಐದು ಕುರಿಗಳು ಸಜೀವ ದಹನವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ರಾಯಚೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Next Story