Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಜಿಲ್ಲಾಡಳಿತದಿಂದ ಡಾ.ಬಾಬು...

ರಾಯಚೂರು | ಜಿಲ್ಲಾಡಳಿತದಿಂದ ಡಾ.ಬಾಬು ಜಗಜೀವನ ರಾಮ್ ಜಯಂತಿ ಆಚರಣೆ

ಡಾ.ಬಾಬು ಜಗಜೀವನ ರಾಮ್ ಅವರ ವ್ಯಕ್ತಿತ್ವ, ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಿ : ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ

ವಾರ್ತಾಭಾರತಿವಾರ್ತಾಭಾರತಿ5 April 2025 7:32 PM IST
share
ರಾಯಚೂರು | ಜಿಲ್ಲಾಡಳಿತದಿಂದ ಡಾ.ಬಾಬು ಜಗಜೀವನ ರಾಮ್ ಜಯಂತಿ ಆಚರಣೆ

ರಾಯಚೂರು : ಹಸಿರು ಕ್ರಾಂತಿ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನ ರಾಮ್ ಅವರ ಆದರ್ಶ, ಚಿಂತನೆಗಳು ಎಲ್ಲಾ ಕಾಲಕ್ಕೂ ಮಾದರಿಯಾಗಿದ್ದು, ಅವರ ವ್ಯಕ್ತಿತ್ವ ಹಾಗೂ ಜೀವನ ಚರಿತ್ರೆಯನ್ನು ಯುವಪೀಳಿಗೆಗೆ ಪರಿಚಯಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ಹೇಳಿದರು.

ಎ.5ರ ಶನಿವಾರ ದಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ಡಾ.ಬಾಬು ಜಗಜೀವನ ರಾಮ್ ಅವರ 118ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಶೋಷಿತರ ಹಕ್ಕುಗಳಿಗಾಗಿ ಹೋರಾಟ ಮಾಡಿದ ಮಹಾನ್ ನಾಯಕರಾದ ಡಾ.ಬಾಬುಜಗಜೀವನರಾಮ್‌ ಅವರು ಶೋಷಿತರ ಆಶಾಕಿರಣರಾಗಿದ್ದಾರೆ ಎಂದರು.

ನಾಲ್ಕು ದಶಕಗಳ ಕಾಲ ಸಂಸತ್ ಸದಸ್ಯರಾಗಿ ಅಪರಿಮಿತವಾಗಿ ಸೇವೆ ಸಲ್ಲಿಸಿದ್ದಾರೆ. ರಾಷ್ಟ್ರದ ಕೃಷಿ ಸಚಿವರಾಗಿ ಹಸಿರು ಕ್ರಾಂತಿಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ. ಸ್ವಾತಂತ್ರೋತ್ತರ ಭಾರತದಲ್ಲಿ ಆಹಾರ ಕೊರತೆ ಎದುರಾದಾಗ ಸುಧಾರಿತ ಬಿತ್ತನೆ ಬೀಜ ಹಾಗೂ ಸುಧಾರಿತ ತಳಿಗಳನ್ನು ಅಳವಡಿಸಿಕೊಂಡು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಹಸಿರುಕ್ರಾಂತಿಯ ಹರಿಕಾರ ಎಂದೇ ಖ್ಯಾತಿಯಾಗಿದ್ದಾರೆ ಎಂದರು.

ರಾಯಚೂರು ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ಮಾತನಾಡಿ, ಹಸಿರು ಕ್ರಾಂತಿಯ ಹರಿಕಾರರಾಗಿದ್ದ ಮಾಜಿ ಉಪಪ್ರಧಾನಿ ಬಾಬು ಜಗಜೀವನ್ ರಾಮ್ ಅವರ ವಿಚಾರಧಾರೆಗಳು, ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮುಂದಿನ 10 ವರ್ಷಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಜೋಡಿಸಿದ್ದಲ್ಲಿ ಮಾತ್ರ ರಾಯಚೂರು ಜಿಲ್ಲೆಯನ್ನು ಮೈಸೂರು ಜಿಲ್ಲೆಯ ರೀತಿಯಲ್ಲಿ ಬದಲಾವಣೆ ಮಾಡಲು ಸಾಧ್ಯ ಎಂದರು.

ಈ ವೇಳೆ ಉಪನ್ಯಾಸಕರಾಗಿ ಮೈಸೂರು ವಿಶ್ವವಿದ್ಯಾಲಯದ ಡಾ.ಬಾಬು ಜಗಜೀವನ ರಾಮ್ ಅಧ್ಯಯನ ಕೇಂದ್ರದ ಸಂಶೋಧನಾ ಅಧಿಕಾರಿಗಳಾದ ಡಾ.ಶ್ರೀನಿವಾಸ ಮೂರ್ತಿ ಎಂ. ಮಾತನಾಡಿರು.

ವಿವಿಧ ಗಣ್ಯರಿಂದ ಮಾಲಾರ್ಪಣೆ :

ಹಸಿರು ಕ್ರಾಂತಿ ಹರಿಕಾರ, ಭಾರತದ ಮಾಜಿ ಉಪಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನರಾಂ ಅವರ 118ನೇ ಜಯಂತಿ ಅಂಗವಾಗಿ ನಗರದ ರೈಲ್ವೇ ನಿಲ್ದಾಣ ಹತ್ತಿರವಿರುವ ಡಾ.ಬಾಬು ಜಗಜೀವನ ರಾಮ್ ಅವರ ಪುತ್ಥಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್.ಭೋಸರಾಜು ಸೇರಿದಂತೆ ವಿವಿಧ ಗಣ್ಯರಿಂದ ಮಾಲಾರ್ಪಣೆ ಮಾಡಿದರು.

ಈ ವೇಳೆ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ್, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದಪ್ಪ ಸೇರಿದಂತೆ ವಿವಿಧ ಸಂಘ-ಸಂಸ್ಥೆಯ ಮುಖಂಡರು ಇದ್ದರು.

ವಿದ್ಯಾರ್ಥಿಗಳಿಗೆ ಸನ್ಮಾನ :

ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಸೀತಮ್ಮ , ಚೈತ್ರ ಜ ಹಾಗೂ ಪೂಜಾ ವಿದ್ಯಾರ್ಥಿನಿಯರಿಗೆ ವಿವಿಧ ಗಣ್ಯರಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದೇ ಸಂದರ್ಭದಲ್ಲಿ ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ., ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಚಿದಾನಂದಪ್ಪ, ರಾಯಚೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಗುರುಸಿದ್ದಯ್ಯಸ್ವಾಮಿ ಹಿರೇಮಠ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ ನಾಯಕ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜೇಂದ್ರ ಜಲ್ದಾರ್ ಸೇರಿದಂತೆ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X