ರಾಯಚೂರು | ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ.ಕೆ.ಆರ್.ದುರುಗೇಶ್ ಅಧಿಕಾರ ಸ್ವೀಕಾರ
ರಾಯಚೂರು : ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಡಾ.ಕೆ.ಆರ್.ದುರುಗೇಶ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿರುವ ದುರುಗೇಶ್ ಅವರಿಗೆ ಇದೀಗ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರ ವಹಿಸಿ ಆದೇಶಿಸಲಾಗಿದೆ.
ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವೈಯಕ್ತಿಕ ಗಮನಕ್ಕೆ ತರುವಂತಹ ಪತ್ರಗಳು ಹಾಗೂ ಅರೆ ಸರಕಾರಿ ಪತ್ರಗಳನ್ನು ಡಾ.ಕೆ.ಆರ್.ದುರುಗೇಶ್ ಆಯುಕ್ತರು, ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರ, ರಾಯಚೂರು ಐ.ಡಿ.ಎಸ್.ಎಮ್.ಟಿ ಬಡವಾಣೆ, ಮಂತ್ರಾಲಯ ರೋಡ್, ರಾಯಚೂರಿಗೆ ಕಳುಹಿಸಿಕೊಡುವಂತೆ ಪ್ರಕಟಣೆ ತಿಳಿಸಿದೆ.
Next Story