ರಾಯಚೂರು | ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ : ಇಬ್ಬರಿಗೆ ಗಾಯ
ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಸಬಾ ಲಿಂಗಸುಗೂರು-ಮುದಗಲ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಲಾರಿ ಚಾಲಕ ಮುದಗಲ್ ನ ಸೈಯದ್ ಹುಸೇನ್, ಕ್ಲೀನರ್ ಸೈಫ್ ಗಾಯಗೊಂಡವರು ಎಂದು ತಿಳಿದುಬಂದಿದೆ.
ಗಾಯಾಳುಗಳಿಗೆ ಚಿಕಿತ್ಸೆಗಾಗಿ ಲಿಂಗಸುಗೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story