ರಾಯಚೂರು | ಜಲಜೀವನ್ ಮಿಷನ್ ಕಾಮಗಾರಿ ಪರಿಶೀಲನೆ
ರಾಯಚೂರು : ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ ಗ್ರಾಮೀಣ ಭಾಗದಲ್ಲಿ ಪ್ರವಾಸ ಕೈಗೊಂಡು ಜಲಜೀವನ ಮಿಷನ್ ಯೋಜನೆಯ ಪ್ರಗತಿ ಪರಿಶೀಲನೆ ನಡೆಸಿದರು.
ಸಿಂಧನೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂಚಿನಾಳ ಕ್ಯಾಂಪ್ ಕೆ. ಗ್ರಾಮಕ್ಕೆ ಭೇಟಿ ನೀಡಿ ಜಲಜೀವನ್ ಮಿಷನ್ ಕಾಮಗಾರಿಯ ಸ್ಥಿತಿಗತಿಯ ಬಗ್ಗೆ ಖುದ್ದು ಪರಿಶೀಲಿಸಿದರು.
ಕಾಮಗಾರಿಗಳನ್ನು ಉತ್ತಮ ಗುಣಮಟ್ಟದ ರೀತಿಯಲ್ಲಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ, ಸಹಾಯಕ ನಿರ್ದೇಶಕರು (ಪಂ.ರಾಜ್) ಅಮರ ಗುಂಡಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ದತ್ತಾತ್ರೇಯ, ಕಿರಿಯ ಸಹಾಯಕ ಅಭಿಯಂತರರು ಅಜರುದ್ದೀನ್, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಲ್ಲೇಶಪ್ಪ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಇದ್ದರು.
Next Story