ಜ.21 ರಂದು ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್ ಸಮಾವೇಶ ; ಸಚಿವ ಎನ್.ಎಸ್.ಬೋಸರಾಜು

ಎನ್.ಎಸ್.ಬೋಸರಾಜು
ರಾಯಚೂರು : ಬೆಳಗಾವಿಯಲ್ಲಿ ಜ.21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನುಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಸಚಿವ ಎನ್.ಎಸ್.ಬೋಸರಾಜು ತಿಳಿಸಿದರು.
ಅವರಿಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಸಮಾವೇಶವನ್ನು ಈಗ ದಿನಾಂಕ ನಿಗದಿ ಮಾಡಲಾಗಿದೆ.
ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿ26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಮಾವೇಶವನ್ನು ಮಾಡಲಾಗುತ್ತಿದೆ ಎಂದರು.
ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಲಿದ್ದಾರೆ.
ಜಿಲ್ಲೆಯ ಪ್ರತಿ ತಾಲ್ಲೂಕಿನಿಂದ ನೂರು ಜನಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷ ಗಾಂಧೀಜಿ ಆದರ್ಶ, ಹಾದಿಯಲ್ಲಿಯೇ ನಡೆಯುತ್ತದೆ. ಆದರೆ ಬಿಜೆಪಿ ಪಕ್ಷ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದರು.