Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ವಕ್ಫ್ ತಿದ್ದುಪಡಿ ಮಸೂದೆ...

ರಾಯಚೂರು | ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 April 2025 9:07 AM IST
share
Photo of Protest

ರಾಯಚೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೇವದುರ್ಗ ಮುಸ್ಲಿಂ ಸಮುದಾಯದಿಂದ ಬೃಹತ್ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಟಿಎಪಿಎಂಎಸಿ ಆವರಣದಲ್ಲಿ ಮುಸ್ಲಿಂ ಜನಾಂಗದ ಎಲ್ಲಾ ನಾಯಕರು ಸಾವಿರಾರು ಜನಸಂಖ್ಯೆಯಲ್ಲಿ ಪಾಲ್ಗೊಂಡು ಕೇಂದ್ರ ಸರಕಾರ ವಿರುದ್ಧ ಕೈಗೆ ಕಪ್ಪು ಪಟ್ಟಿಕಟ್ಟಿಕೊಂಡು ಬೃಹತ್ ಪ್ರತಿಭಟನಾ ರ್‍ಯಾಲಿಗೆ ಚಾಲನೆಯನ್ನು ನೀಡಿದರು.

ಪ್ರಮುಖ ಬೀದಿಗಳಾದ ಜಹೀರುದ್ದೀನ್ ಪಾಷಾ ಸರ್ಕಲ್, ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಹಾದಿಯಾಗಿ ಮಹಾತ್ಮಗಾಂಧಿ ವೃತ್ತ, ಬಸವ ವೃತ್ತ, ಕ್ಲಬ್ ರಸ್ತೆ ಮುಂಭಾಗ ದಿಂದ ಮಿನಿವಿಧಾನ ಸೌಧವರೆಗೆ ರ್‍ಯಾಲಿ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಕ್ಪ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮುಸ್ಲಿಂಮರ ಹಕ್ಕನ್ನು ಕಸಿದುಕೊಂಡಿದೆ. ಸಂಸತ್ತಿನ ಎರಡು ಸದನದಲ್ಲಿ ಮಿತ್ರಪಕ್ಷಗಳ ಮೇಲೆ ಒತ್ತಡ ಹಾಕಿ ಒತ್ತಾಯ ಪೂರ್ವಕವಾಗಿ ಈ ಕಾಯ್ದೆ ಜಾರಿಗೆ ತಂದಿದೆ. ಇದರಿಂದ ಮುಸ್ಲಿಂಮರಿಗೆ ನೀಡಬೇಕಿದ್ದ ವಕ್ಫ್ ಸೌಲಭ್ಯ ಮೊಟಕುಗೊಳ್ಳಲಿದ್ದು, ವಕ್ಫ್ ಆಸ್ತಿ ಸರಕಾರದ ಪಾಲಾಗುವ ಆತಂಕವಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರು, ದಲಿತರ, ಬಡವರ ಮೇಲೆ ಗಧಾ ಪ್ರಹಾರ ನಡೆಸುತ್ತಿದ್ದು, ಬಡ ಜನರು ಜೀವನ ನಡೆಸುವುದು ಕಷ್ಟವಾಗಿದೆ. ದೇಶಾದ್ಯಂತ ಕೋಮು ಗಲಭೆ ನಡೆಸುವ ಮೂಲಕ ಹಿಂದೂ, ಮುಸ್ಲಿಂಮರ ನಡುವೆ ಒಳ ಜಗಳ ಹಚ್ಚುವ ಕೆಲಸ ಸರಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಬೇಕು. ಈ ಹಿಂದೆ ಇದ್ದ ವಕ್ಫ್ ಕಾಯ್ದೆಯನ್ನೆ ಮುಂದುವರಿಸಬೇಕು. ನಿರ್ಲಕ್ಷ್ಯ ವಹಿಸಿದಲ್ಲಿ ದೇಶಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದರು.

ಈ ವೇಳೆ ಮುಖಂಡರಾದ ಜಹೀರು ಅಬ್ಬಾಸ್ ಹಫಿಸಾಬ್, ಅರ್ಮಾನ್ ಘನಿ, ಶಾಲಾಮ್ ಆಫೀಸ್ ಸಾಬ್, ಮೈಬೂಬ್ ಮೌಲಾನಾ ಮುಕ್ತಿ, ಅಬ್ದುಲ್ ಅಜೀಜ್, ಎಕ್ಬಾಲ್ ಸಾಬ್ ಔದೊಡ್ಡಿ, ಸಾಜೀದ್ ಶೆಠ್, ರಾಜ್ ಮುಹಮ್ಮದ್ ತಾತ, ಶಬ್ಬೀರ್ ಅಹಮ್ಮದ್ ಔದೊಡ್ಡಿ, ಮೈನುದ್ದಿನ್ ಡಿಜೆ, ಅಬ್ಬಾಸ್ ಹುಸೇನಿ ಕಬಡ್ಡಿ, ಇಮ್ರಾನ್ ಕೆ.ಎಂ., ವಿಶ್ವನಾಥ ಬಲ್ಲಿದವ್, ಮೋಹನ ಬಲ್ಲಿದವ್, ಅಮಿನ್ಸಾಬ್ ಗೌರಂಪೇಟೆ, ಬಾಷಾ ಕವಾಸ್, ಖಾಜಾ ಹುಸೇನ್ ಟೈಗರ್, ಖಾಜಾಸಾಬ್ ಕರಿಗುಡ್ಡ, ಅಸ್ಪಾಕ್ ಹುಸೇನ್, ಅಬ್ಬಾಸ್ ಹುಸೇನ್, ಖಲೀಮ್ ಖುರೇಷಿ, ಸೋಫಿಬಾಬ್ ಖುರೇಷಿ, ನಿಜಾಮುದ್ದೀನ್ ನಾಗುಂಡಿ, ಖಾದರ್ ಪಾಷಾ, ಉಮಾರ್ ಕಬಡ್ಡಿ ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X