ರಾಯಚೂರು | ಯುವ ಮತದಾರರ ಹೆಸರು ಸೇರಿಸಲು ಅಧಿಕಾರಿಗಳಿಗೆ ಚುನಾವಣಾ ವೀಕ್ಷಕರ ಸೂಚನೆ
ರಾಯಚೂರು : ಜಿಲ್ಲೆಯಲ್ಲಿ ಯುವ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿ ಎಂದು ಚುನಾವಣಾ ವೀಕ್ಷಕ ಉಜ್ವಲ್ ಕುಮಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಆರ್ಒ, ಎಇಆರ್ಒ ಹಾಗೂ ಚುನಾವಣಾ ಇಲಾಖೆ ಅಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆಯಲ್ಲಿ ಸೂಚನೆ ನೀಡಿದರು.
ಚುನಾವಣೆ ವೇಳೆ ಮತದಾರರ ಪಟ್ಟಿಯಲ್ಲಿ ಸಾಕಷ್ಟು ಗೊಂದಲಗಳಿಗೆ ಕಾರಣವಾಗುತ್ತಿದ್ದು, ರಾಜಕೀಯ ಪಕ್ಷಗಳಿಂದ ದೂರುಗಳು ಬರುತ್ತಿವೆ. ಗ್ರಾಮಗಳಲ್ಲಿ ಮತದಾನ ಕೇಂದ್ರದ ವ್ಯಾಪ್ತಿಯಲ್ಲಿ ಎರಡು ಮೂರು ಕೇಂದ್ರಗಳಿದ್ದಲ್ಲಿ ಹೆಸರುಗಳು ಮತ್ತೊಂದು ಮತದಾನ ಕೇಂದ್ರದ ಪಟ್ಟಿಯಲ್ಲಿ ಸೇರ್ಪಡೆಯಾಗುತ್ತಿದೆ, ಇದರಿಂದ ಮತದಾನದಿಂದಲೂ ದೂರ ಉಳಿಯಬಹುದಾಗಿದೆ ಎಂದು ಹೇಳಿದರು.
ಮರಣ ಹೊಂದಿರುವವರ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದರೆ ಪರಿಶೀಲಿಸಿ ರದ್ದುಗೊಳಿಸಬೇಕು. ಜಿಲ್ಲೆಯಲ್ಲಿ ವಿವಿಧ ಕಡೆ ವೀಕ್ಷಣೆ ಮಾಡಲಾಗಿದೆ. ಅವಿಕುಟುಂಬಗಳು ಬೇರೆಯಾಗಿ ವಿಳಾಸ ಬದಲಾಗಿದ್ದಲ್ಲಿ ಹೊಸ ವಿಳಾಸ ಸೇರಿಸಬೇಕು. ಕೇಂದ್ರ ಚುನಾವಣಾ ಆಯೋಗ ಸೂಕ್ತ ನಿರ್ದೇಶಕ ನೀಡಿದ್ದು ಪ್ರತಿ 6 ತಿಂಗಳಿಗೊಮ್ಮೆ ಮನೆ ಮನೆ ಪರಿಶೀಲನೆ ಮಾಡಬೇಕು, ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.