ರಾಯಚೂರು | ಪಿಡಿಒ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ: ಪರೀಕ್ಷೆ ಬರೆಯದೆ ಅಭ್ಯರ್ಥಿಗಳಿಂದ ಪ್ರತಿಭಟನೆ
24 ಅಭ್ಯರ್ಥಿಗಳಿರುವ ಪರೀಕ್ಷಾ ಕೊಠಡಿಗೆ 12 ಪ್ರಶ್ನೆಪತ್ರಿಕೆ ವಿತರಣೆ!
ರಾಯಚೂರು: ಇಂದು ನಡೆದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅಭ್ಯರ್ಥಿಗಳು ಪರೀಕ್ಷೆ ಬರೆಯದೆ ಪ್ರತಿಭಟನೆ ನಡೆಸಿದ ಘಟನೆ ಸಿಂಧನೂರಿನ ಸರಕಾರಿ ಮಹಾವಿದ್ಯಾಲಯ ನಡೆದಿದೆ.
ಸಿಂಧನೂರು ನಗರದ ಸರಕಾರಿ ಮಹಾವಿದ್ಯಾಲಯ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪಿಡಿಓ ಪರೀಕ್ಷೆ ನಡೆಯುತ್ತಿದೆ. ಇಂದು ಸಾಮಾನ್ಯ ಪ್ರಶ್ನೆಪ್ರತಿಕೆ ಪರೀಕ್ಷೆಯಲ್ಲಿ ಕೆಪಿಎಸ್ ಸಿ ಒಂದು ಕೋಣೆಗೆ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿತ್ತು. ಆದರೆ ಕೇವಲ 12 ಪ್ರಶ್ನೆ ಪ್ರತಿಕೆಗಳನ್ನು ಮಾತ್ರ ಕೆಪಿಎಸ್ ಸಿ ಕಳುಹಿಸಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ 800 ಅಭ್ಯರ್ಥಿಗಳು ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಅನುಮಾನ ಇರುವುದಾಗಿ ಆರೋಪಿಸಿ ಕೆಲವರು ಪರೀಕ್ಷೆ ಹಾಲ್ ನಿಂದ ಹೊರ ನಡೆದರು.
ಬಳಿಕ ನಮಗೆ ನ್ಯಾಯ ಬೇಕು ಎಂದು ಅಭ್ಯರ್ಥಿಗಳು ರಸ್ತೆ ತಡೆದು ಕೆಪಿಎಸ್ ಸಿ ವಿರುದ್ಧ ಆಕ್ರೋಶ ಹೊರ ಹಾಕಿದರು.
ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದಿದ್ದ 800ಕ್ಕೂ ಹೆಚ್ಚು ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದರು.
ಈ ವೇಳೆ ತಹಶಿಲ್ದಾರರ ಅಭ್ಯರ್ಥಿಗಳ ಮನವೊಲಿಸಲು ಯತ್ನಿಸಿದರು. ಪ್ರಶ್ನೆ ಪತ್ರಿಕೆ ಇಲ್ಲದೇ ಪರೀಕ್ಷೆ ಹೇಗೆ ಬರೆಯಬೇಕೆಂದು ಪ್ರಶ್ನಿಸಿದರಲ್ಲದೆ, ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.