Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಬೆಲೆ ಏರಿಕೆ, ವಕ್ಫ್...

ರಾಯಚೂರು | ಬೆಲೆ ಏರಿಕೆ, ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 April 2025 1:12 PM IST
share
Photo of Protest

ರಾಯಚೂರು : ಕೇಂದ್ರದ ಎನ್.ಡಿ.ಎ ಮತ್ತು ರಾಜ್ಯ ಕಾಂಗ್ರೆಸ್ ಸರಕಾರ ಮೇಲಿಂದ ಮೇಲೆ ಪೆಟ್ರೋಲ್, ಡೀಸೆಲ್, ಗ್ಯಾಸ್ ,ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದನ್ನು ಸಿಪಿಐಎಂಎಲ್ ಲಿಬರೇಷನ್ ಸಿಂಧನೂರು ತಾಲೂಕು ಘಟಕದಿಂದ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ರಾಷ್ಟ್ರಪತಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ನಿರಂತರ ಏರಿಕೆಯಾಗಿದ್ದು, ಕೇಂದ್ರ ಸರಕಾರ ಮತ್ತು ರಾಜ್ಯ ಸರ್ಕಾರ ಇಂಧನದ ಬೆಲೆ ಏರಿಕೆ ಮೂಲಕ ಮತ್ತೊಮ್ಮೆ ಬರೆ ಎಳೆದಿದೆ. ಇಷ್ಟು ಪ್ರಮಾಣದ ಬೆಲೆ ಏರಿಕೆಯಾಗಿರುವುದು ಇದುವರೆಗಿನ ಇತಿಹಾಸದಲ್ಲಿಯೇ ಇಲ್ಲ. ಪೆಟ್ರೋಲ್ ಇಂದಿನ ದರ 102.92 ಪೈಸ್, ಡೀಸೆಲ್ ಇಂದಿನ ದರ 91.02 ಪೈಸೆ ಇದ್ದು, ಪ್ರತಿ ಲೀಟರ್ 2 ರೂಪಾಯಿ ಹೆಚ್ಚಿಸಲಾಗಿದೆ. ಮನಬಂದಂತೆ ಇಂಧನ ಬೆಲೆ ಹೆಚ್ಚಿಸುವುದರಿಂದ ಸಾರಿಗೆ, ಸರಕು ಸಾಗಣೆ, ವ್ಯಾಪಾರ ವಹಿವಾಟು, ಕೃಷಿ, ಕೈಗಾರಿಕೆ ಸೇರಿ ಇನ್ನಿತರೆ ವಲಯಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದರಿಂದ ಜನಸಾಮಾನ್ಯರು ಮತ್ತಷ್ಟು ಸಂಕಷ್ಟ ಎದುರಿಸಬೇಕಿದೆ ಎಂದು ಸಿಪಿಐಎಂಎಲ್ ಲಿಬರೇಶನ್ ಮುಖಂಡ ಬಸವರಾಜ ಕೊಂಡೆ ಆಪಾದಿಸಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಹಾಲು, ನೀರು, ವಿದ್ಯುತ್, ಡೀಸೆಲ್ ಮತ್ತು ಮೆಟ್ರೋ ದರ ಸೇರಿದಂತೆ ಹಲವಾರು ಅಗತ್ಯ ಸೇವೆಗಳ ಬೆಲೆ ಏರಿಕೆ ಮಾಡಿದೆ. ತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ ಮತ್ತು ಆಸ್ತಿ ತೆರಿಗೆಯ ಮೇಲಿನ ತೆರಿಗೆಗಳನ್ನೂ ಸಹ ಹೆಚ್ಚಿಸಲಾಗಿದೆ. ಬೆಲೆ ಏರಿಕೆಯಿಂದ ಸರ್ಕಾರಗಳು ಬಡವರು ಮತ್ತು ಮಧ್ಯಮ ವರ್ಗದವರನ್ನು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಸಿಲುಕಿಸಿದೆ. ಆರ್ಥಿಕ ನೀತಿಗಳು ಜಾರಿ ಮಾಡವ ವಿಷಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಒಂದೇ ನಾಣ್ಯದ ಎರಡು ಮುಖಗಳು ರಾಜ್ಯದಲ್ಲಿ ನಿರಂತರ ವಿಪರೀತ ಬೆಲೆ ಏರಿಕೆ, ಗಗನಕ್ಕೇರುತ್ತಿರುವ ನಿರುದ್ಯೋಗ, ಕೆಳಕ್ಕೆ ಉರುಳುತ್ತಿರುವ ರೂಪಾಯಿ, ಅಭೂತಪೂರ್ವ ವ್ಯಾಪಾರ ಕೊರತೆ ಮತ್ತು ಜಿಡಿಪಿ ಮುಗ್ಗರಿಸುತ್ತಿರುವ ಸನ್ನಿವೇಶದಲ್ಲಿ ಜನರ ಜೀವನೋಪಾಯದ ಮೇಲೆ ಈ ಕ್ರೂರ ಪ್ರಹಾರ ನಡೆಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಏರಿಕೆಗಳು ಜನರ ಜೀವನೋಪಾಯವನ್ನು ಮತ್ತಷ್ಟು ಹಾಳು ಮಾಡುತ್ತವೆ. ಸರ್ಕಾರದ ಈ ನೀತಿ ಬಡ, ಮಧ್ಯಮ ವರ್ಗದವರ ಬದುಕುವ ಹಕ್ಕನ್ನು ಬಲವಂತವಾಗಿ ಕಿತ್ತುಕೊಳ್ಳುವುದಾಗಿದೆ. ಅಲ್ಲದೇ ಬಡವರ ಮೇಲೆ ಹೆಚ್ಚು ತೆರಿಗೆ ಹೇರಿ, ಶ್ರೀಮಂತರ ತೆರಿಗೆ ಮತ್ತು ಸಾಲ ಮನ್ನಾ ಮಾಡುವ ಹುನ್ನಾರದ ಭಾಗವಾಗಿದೆ. ಈ ಕೂಡಲೇ ಜನದ್ರೋಹಿ ನೀತಿಗಳನ್ನು ಕೈ ಬೀಡಬೇಕು. ಸರಕಾರಿ ಒಡೆತನದ ಉಹಿಸಿ, ಬಿಪಿಸಿಎಲ್, ಎಚ್ ಪಿಸಿಎಲ್ ಕಂಪನಿಗಳ ಷೇರುಗಳು ಮಾರುಕಟ್ಟೆಯಲ್ಲಿದ್ದು, ಖಾಸಗಿ ಕಂಪನಿಗಳು ಇಂಧನ ಮಾರಾಟ ಉದ್ಯಮದಲ್ಲಿರುವುದರಿಂದ ಕಚ್ಚಾತೈಲ ಬೆಲೆ ಕುಸಿದಾಗ ಅವೈಜ್ಞಾನಿಕ ಬೆಲೆ ಏರಿಕೆಯಿಂದ ದೇಶದ ಜನರ ಹಣವನ್ನು ಲೂಟಿ ಹೊಡೆಯುತ್ತವೆ. ಈ ನಡುವೆ ಕಚ್ಚಾ ತೈಲ ಬೆಲೆ ಕುಸಿದಾಗಲೂ ಜನಸಾಮಾನ್ಯರಿಗೆ ಯಾವುದೇ ಲಾಭ ಇಲ್ಲ, ಹೆಚ್ಚಾದಾಗ ಮಾತ್ರ ಅವರ ಮೇಲೆ ಹೊರೆ ಹಾಕುತ್ತ ಬರಲಾಗುತ್ತಿದೆ. ಕೊರೊನಾದಂತಹ ಬಿಗುವಿನ ವಾತಾವರಣದ ದುರ್ಲಾಭ ಪಡೆದು ಮನಬಂದಂತೆ ಇಂಧನ ಬೆಲೆ ಏರಿಕೆ ಮಾಡಿದ್ದಲ್ಲದೇ, ಕೇಂದ್ರದ ಎನ್ ಡಿ ಎ ಮತ್ತು ರಾಜ್ಯ ಸರಕಾರ ಜನವಿರೋಧಿ ನೀತಿಗಳನ್ನು ಜಾರಿಗೆಗೊಳಿಸಿದೆ. ಇದು ಖಂಡನಾರ್ಹ. ಹಾಗಾಗಿ ರೈತರು, ಕಾರ್ಮಿಕರು ಹಾಗೂ ಜನಸಾಮಾನ್ಯರಿಗೆ ಮಾರಕವಾಗಿರುವ ನೀತಿಗಳನ್ನು ಕೈಬಿಡಬೇಕು ಹಾಗೂ ಇಂಧನ ಬೆಲೆ ಏರಿಕೆಯನ್ನು ಸರಕಾರ ಇಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಸವರಾಜ ಕೊಂಡೆ ಸಿಪಿಐಎಂಎಲ್ ಲಿಬರೇಶನ್ ತಾಲೂಕು ಮುಖಂಡರು, ಆರ್.ಎಚ್ ಕಲಮಂಗಿ, ಶ್ರೀನಿವಾಸ ಬುಕ್ಕನ್ನಟ್ಟಿ, ಅಜು, ಸಾದಿಕ್, ಹುಸೇನ್, ರಹೀಮ್ ಬಸವರಾಜ ಅರಳಹಳ್ಳಿ, ಹುಸೇನಪ್ಪ, ರಮೇಶ್, ಯಮನೂರಪ್ಪ, ಇತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X