Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಸಾರಿಗೆ ಪ್ರಯಾಣ ದರ ಹೆಚ್ಚಳ...

ರಾಯಚೂರು: ಸಾರಿಗೆ ಪ್ರಯಾಣ ದರ ಹೆಚ್ಚಳ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Jan 2025 5:50 PM IST
share
ರಾಯಚೂರು: ಸಾರಿಗೆ ಪ್ರಯಾಣ ದರ ಹೆಚ್ಚಳ ಖಂಡಿಸಿ ಸಿಪಿಐಎಂನಿಂದ ಪ್ರತಿಭಟನೆ

ರಾಯಚೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ವ್ಯಾಪ್ತಿಯಲ್ಲಿ ಪ್ರಯಾಣಿಕರ ಸಾರಿಗೆ ದರ ಹೆಚ್ಚಳ ಮಾಡಿದ ಕ್ರಮವನ್ನು ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಡೀಸೆಲ್ ದರಗಳ ಹೆಚ್ಚಳ ಮತ್ತು ಸಿಬ್ಬಂದಿ ವೆಚ್ಚದ ಹೆಚ್ಚಳದ ನೆಪದಲ್ಲಿ ದರ ಏರಿಕೆ ಮಾಡಿರುವುದು ಆವೈಜ್ಞಾನಿಕವಾಗಿದೆ. ದರ ಹೆಚ್ಚಳ ಜನ ಸಾಮಾನ್ಯ ವಿರೋಧಿಯಾಗಿದೆ ಎಂದು ಪ್ರತಭಟನಾಕಾರರು ದೂರಿದರು.

ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್ ದರವು ಮುಕ್ತ ಮಾರುಕಟ್ಟೆ ದರಗಳಿಗಿಂತ ದುಬಾರಿಯಾಗಿದೆ. ಸರಕಾರಕ್ಕೆ ವೆಚ್ಚವನ್ನು ಕಡಿಮೆ ಮಾಡಬೇಕೆಂದಿದ್ದರೆ ಸಾರಿಗೆ ನಿಗಮಗಳಿಗೆ ಪೂರೈಸುವ ಡೀಸೆಲ್ ದರವನ್ನು ಸಬ್ಸಿಡಿ ದರದಲ್ಲಿ ಪೂರೈಸಬೇಕು. ಮುಕ್ತ ಮಾರುಕಟ್ಟೆ ದರಗಳಲ್ಲಾದರೂ ಪೂರೈಸಬೇಕು. ಆದ್ದರಿಂದ ಶೇ.15 ರ ದರ ಹೆಚ್ಚಳಕ್ಕೆ ಡೀಸೆಲ್ ದರ ಹೆಚ್ಚಳ ಕಾರಣ ಎನ್ನುವುದು ಸುಳ್ಳು ನೆಪವಾಗಿದೆ ಎಂದು ಆಪಾದಿಸಿದರು.

ಸಾರಿಗೆ ನಿಗಮಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳ ವೆಚ್ಚ ಹೆಚ್ಚಳವಾಗಿದೆ ಎಂದು ಎನ್ನಲಾಗಿದೆ. ನಾಲ್ಕು ನಿಗಮಗಳಲ್ಲಿ ಸಿಬ್ಬಂದಿ ಗಳಿಗೆ ಸುಮಾರು 3 ವರ್ಷಗಳ ವೇತನ ಬಾಕಿ ನೀಡಬೇಕಿದೆ ಮತ್ತು ಹೊಸ ವೇತನ ಒಪ್ಪಂದ ಮಾಡಬೇಕಿದೆ ಎಂದು ಆಗ್ರಹಿಸಿದರು.

1950 ರ ಆರ್‌ಟಿಸಿ ಕಾಯ್ದೆ ಪ್ರಕಾರ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಸರ್ಕಾರ ಬಜೆಟ್ ಬೆಂಬಲ ನೀಡುವುದು ಅಗತ್ಯವಾಗಿದೆ. ಸಾರ್ವಜನಿಕ ಹಿತ ದೃಷ್ಟಿಯಿಂದ ಲಾಭ ನಷ್ಟದ ಲೆಕ್ಕದಲ್ಲಿ ಸರಕಾರ ನೋಡಬಾರದು. ನಷ್ಟ ಉಂಟಾದಲ್ಲಿ ಸರಕಾರ ಅದನ್ನು ಭರಿಸಬೇಕಾಗಿದೆ ಹಾಗೂ ಖಾಸಗಿ ಕಂಪನಿಗಳ ಜೊತೆ ದುಬಾರಿ ಒಪ್ಪಂದಗಳನ್ನು ಮಾಡಿಕೊಂಡು ನಿಗಮಗಳೇ ನಷ್ಟ ಉಂಟು ಮಾಡಿಕೊಳ್ಳುತ್ತಿವೆ. ನಿಗಮದ ಬಸ್ ಗಳ ಮೇಲಿನ ತೆರಿಗೆಗಳನ್ನು ಕಡಿಮೆ ಮಾಡುವ ಮೂಲಕ ನಷ್ಟ ಕಡಿಮೆ ಮಾಡಬಹುದು. ಈ ವಿಧಾನಗಳನ್ನು ಕೈ ಬಿಟ್ಟು ದರ ಹೆಚ್ಚಿಸುತ್ತಿರುವುದು ಜನವಿರೋಧಿ ಕ್ರಮಕ್ಕೆ ಸರಕಾರ ಮುಂದಾಗಿದೆ ಎಂದು ದೂರಿದರು.

ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಹೆಚ್ಚಳದಿಂದ ಸಾರ್ವಜನಿಕರು ಬೇಸತ್ತು ಹೋಗಿದ್ದಾರೆ. ರಾಜ್ಯ ಸರ್ಕಾರ ದರ ಹೆಚ್ಚಳದ ತೀರ್ಮಾನವನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ, ತಾಲೂಕ ಕಾರ್ಯದರ್ಶಿ ಹೆಚ್.ಪದ್ಮಾ, ಡಿ.ಎಸ್.ಶರಣಬಸವ, ಕರಿಯಪ್ಪ ಅಚ್ಚೋಳ್ಳಿ, ವರಲಕ್ಷ್ಮೀ, ಗೋಕರಮ್ಮ, ಶ್ರೀನಿವಾಸ, ಕೆ.ಶ್ರೀನಿವಾಸ ಸೇರಿದಂತೆ ಅನೇಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X