ರಾಯಚೂರು | ರಸ್ತೆ ಅಪಘಾತ : ಇಬ್ಬರು ಬೈಕ್ ಸವಾರರು ಮೃತ್ಯು
ಸಾಂದರ್ಭಿಕ ಚಿತ್ರ
ರಾಯಚೂರು : ರೋಡ್ ಬ್ರೇಕರ್ ಡಾಟುತಿದ್ದ ವೇಳೆ ನಿಯಂತ್ರಣ ತಪ್ಪಿ ಬೈಕ್ ಸವಾರರು ಲಾರಿಯ ಹಿಂಬದಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಲಿಂಗಸಗೂರು ತಾಲ್ಲೂಕಿನ ಛತ್ತರ ಗ್ರಾಮದಲ್ಲಿ ನಡೆದಿದೆ.
ರಾಯಚೂರಿನಿಂದ ಕೊಪ್ಪಳ ಕಡೆಗೆ ಹೊರಟಿದ್ದ ಬೈಕ್ ಸವಾರರು, ರೋಡ್ ಬ್ರೇಕರ್ ಬಳಿ ಸವಾರನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.
ಬೈಕ್ ಸವಾರರು ನಿಯಂತ್ರಣ ತಪ್ಪಿ ಕೆಳಗೆ ಬೀಳುತ್ತಿದ್ದಂತೆ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸವಾರರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮುದಗಲ್ ಪೊಲೀಸರ ಸ್ಥಳ ಪರಿಶೀಲನೆ ನಡೆಸಿದ್ದಾರೆ.
Next Story