ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ; 39 ವಿದ್ಯಾರ್ಥಿಗಳು ಗೈರು

ಸಾಂದರ್ಭಿಕ ಚಿತ್ರ
ರಾಯಚೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ 2025ರ ಮಾ.17ರ ಸೋಮವಾರ ನಡೆದ ದ್ವಿತೀಯ ಪಿಯುಸಿ-01ರ ಭೂಗೋಳಶಾಸ್ತ್ರ ವಿಷಯದ ಪರೀಕ್ಷೆಯಲ್ಲಿ ಒಟ್ಟು 39 ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ.
ಜಿಲ್ಲೆಯ 49 ಕೇಂದ್ರಗಳಲ್ಲಿ ಭೂಗೋಳಶಾಸ್ತ್ರ ವಿಷಯದಲ್ಲಿ ಒಟ್ಟು 425 ನೋಂದಣೆಯಾಗಿದ್ದು, 386 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿಯಾಗಿದ್ದಾರೆ. 39 ಜನ ವಿದ್ಯಾರ್ಥಿಗಳು ಗೈರು ಹಾಜರಿಯಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story