ರಾಯಚೂರು | ಯರಗುಂಟ ಗ್ರಾಮದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಣೆ
ರಾಯಚೂರು : ತಾಲೂಕಿನ ಯರಗುಂಟ ಗ್ರಾಮದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹದೇವಪ್ಪ ಮಾತನಾಡಿ, ಹನ್ನೆರಡನೆಯ ಶತಮಾನದ ಪ್ರಥಮ ಶ್ರೇಣಿಯ ವಚನಕಾರರಲ್ಲಿ ಒಬ್ಬರು. ಇವರ ಜೀವನ ಜರಿತ್ರೆಗೆ ಸಂಬಂಧಿಸಿದ ಅನೇಕ ಅಧಾರಗಳು ವಚನ, ಕಾವ್ಯ ಶಾಸನ, ಐತಿಹ್ಯಗಳಲ್ಲಿ ದೊರಿಯುತ್ತವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಗ್ರಾ.ಪಂ. ಉಪಾಧ್ಯಕ್ಷರಾದ ಸಣ್ಣ ರಂಗಪ್ಪ, ಮಾಜಿ ಗ್ರಾ.ಪಂ. ಸದಸ್ಯರು ಹನುಮಂತು, ಸುರೇಶ್, ತಿಮ್ಮಪ್ಪ ಹಾಗೂ ಸಮಸ್ತ ಭೋವಿ ಸಮಾಜದ ಮುಖಂಡರು ಭಾಗವಹಿಸಿದ್ದರು.
Next Story