ರಾಯಚೂರು | ನಾಳೆ ( ಮಾ.12) ಟೇಬಲ್ ಟೆನ್ನಿಸ್ ಕಟ್ಟಡ ಕಾಮಗಾರಿ ಉದ್ಘಾಟನೆ : ವಿವಿಧ ಗಣ್ಯರು ಭಾಗಿ

PC | GROK
ರಾಯಚೂರು : ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಟೇಬಲ್ ಟೆನ್ನಿಸ್ ಕಟ್ಟಡ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮವನ್ನು ಮಾ.12 ರಂದು ಹಮ್ಮಿಕೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರು ಉದ್ಘಾಟಿಸುವರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಘನ ಉಪಸ್ಥಿತಿ ವಹಿಸುವರು. ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಎಸ್.ಶಿವರಾಜ ಪಾಟೀಲ್ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರು ಆಗಿರುವ ಮಸ್ಕಿ ಕ್ಷೇತ್ರದ ಶಾಸಕರಾದ ಆರ್.ಬಸನಗೌಡ ತುರ್ವಿಹಾಳ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ಸಿಂಧನೂರು ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ, ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷರು ಆಗಿರುವ ಬೀಳಗಿ ಕ್ಷೇತ್ರದ ಶಾಸಕರಾದ ಜಿ.ಟಿ.ಪಾಟೀಲ್, ರಾಯಚೂರು ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ, ಕೊಪ್ಪಳ ಲೋಕಸಭಾ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ವಿಧಾನ ಪರಿಷತ್ ಶಾಸಕರಾದ ಶಶೀಲ್ ಜಿ.ನಮೋಶಿ, ಮಾನವಿ ಕ್ಷೇತ್ರದ ಶಾಸಕರಾದ ಜಿ.ಹಂಪಯ್ಯ ನಾಯಕ, ಲಿಂಗಸಗೂರು ಕ್ಷೇತ್ರದ ಶಾಸಕರಾದ ಮಾನಪ್ಪ ಡಿ.ವಜ್ಜಲ್, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ್ ಬಿ.ಪಾಟೀಲ್, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ ಜಿ.ನಾಯಕ, ವಿಧಾನ ಪರಿಷತ್ ಸದಸ್ಯರಾದ ಶರಣಗೌಡ ಎಲ್.ಪಾಟೀಲ್ ಬಯ್ಯಾಪುರ, ಎ.ವಸಂತಕುಮಾರ, ಬಸನಗೌಡ ಬಾದರ್ಲಿ, ರಾಯಚೂರು ಮಹಾನಗರ ಪಾಲಿಕೆಯ ಅಧ್ಯಕ್ಷರಾದ ನರಸಮ್ಮ ನರಸಿಂಹಲು ಮಾಡಗಿರಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜಶೇಖರ ರಾಮಸ್ವಾಮಿ, ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಿತೇಶ ಕುಮಾರ ಸಿಂಗ್ ಭಾಗವಹಿಸುವವರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಣದೀಪ್ ಡಿ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಚೇತನ್ ಆರ್., ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ ಎಂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.