ರಾಯಚೂರು | ಪ್ರವಾಸಕ್ಕೆ ಬಂದಿದ್ದ ವೇಳೆ ತುಂಗಭದ್ರ ನದಿಯಲ್ಲಿ ಈಜಲು ಹೋದ ಇಬ್ಬರು ಯುವಕರು ಮೃತ್ಯು
ಸಾಂದರ್ಭಿಕ ಚಿತ್ರ
ರಾಯಚೂರು: ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ಬಂದಿದ್ದ ಇಬ್ಬರು ಯುವಕರು ತುಂಗಭದ್ರ ನದಿಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ರಾಯಚೂರಿನ ಎಲೆಬಿಚ್ಚಾಲಿ ಗ್ರಾಮದ ಸಮೀಪದಲ್ಲಿ ಇಂದು(ಶುಕ್ರವಾರ) ನಡೆದಿದೆ.
ಮೃತರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮೂಲದ ಮುತ್ತುರಾಜ್(24), ಮದನ್ (20) ಎಂದು ಗುರುತಿಸಲಾಗಿದೆ.
ಕುಟುಂಬಸ್ಥರೊಂದಿಗೆ ಪ್ರವಾಸಕ್ಕೆ ಆಗಮಿಸಿದ್ದ ಸಮಯದಲ್ಲಿ ಎಲೆಬಿಚ್ಚಾಲಿಯ ಗುರುರಾಯರ ಏಕಶಿಲಾ ವೃಂದಾವನದ (ಜಪದಕಟ್ಟೆ) ದರ್ಶನಕ್ಕೆ ಆಗಮಿಸಿದ್ದರು. ಈ ವೇಳೆ ನದಿಯಲ್ಲಿ ಈಜಲು ಹೋದಾಗ ತಗ್ಗು ಪ್ರದೇಶದಲ್ಲಿ ಸಿಕ್ಕಿಹಾಕಿಕೊಂಡು ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story