Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಸಂಸದ ಬಿ.ವೈ ರಾಘವೇಂದ್ರ ನಿವಾಸಕ್ಕೆ...

ಸಂಸದ ಬಿ.ವೈ ರಾಘವೇಂದ್ರ ನಿವಾಸಕ್ಕೆ ಮುತ್ತಿಗೆಗೆ ಯತ್ನ: 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ7 Feb 2024 1:19 PM IST
share
ಸಂಸದ ಬಿ.ವೈ ರಾಘವೇಂದ್ರ ನಿವಾಸಕ್ಕೆ ಮುತ್ತಿಗೆಗೆ ಯತ್ನ: 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಶಿವಮೊಗ್ಗ: ಕೇಂದ್ರ ಬಿಜೆಪಿ ಸರಕಾರದಿಂದ ಕರ್ನಾಟಕ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಆಗುತ್ತಿರುವ ಮಲತಾಯಿ ಧೋರಣೆ ಖಂಡಿಸಿ ಇಂದು ಯುವ ಕಾಂಗ್ರೆಸ್ ವತಿಯಿಂದ ಸಂಸದ ಬಿ.ವೈ ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಇಂದು ದಿಲ್ಲಿಯ ಜಂತರ್ ಮಂತರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ,‌ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ʼನಮ್ಮ ತೆರಿಗೆ ನಮ್ಮ ಹಕ್ಕು ದಿಲ್ಲಿ ಚಲೋʼ ಬೆಂಬಲಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ನಗರದ ವಿನೋಬ ನಗರದಲ್ಲಿರುವ ಸಂಸದ ಬಿ.ವೈ ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆಗೆ ಯತ್ನಿಸಿದರು.

ಕೇಂದ್ರ ಬಿಜೆಪಿ ಸರಕಾರವು 2017 - 18 ರಿಂದ ಇಲ್ಲಿಯವರೆಗೆ ಕರ್ನಾಟಕ ರಾಜ್ಯಕ್ಕೆ ಜಿಎಸ್‌ಟಿಯ ಪರಿಹಾರದ ನಿಧಿಯಾದ 1,87,000 ಕೋಟಿಗೊಳಷ್ಟು ಹಣವನ್ನು ನೀಡದೆ ಅನ್ಯಾಯ ಮಾಡಿದೆ. ಈ ವರ್ಷ ಇಡೀ ದೇಶದಲ್ಲಿ ಅತಿ ಹೆಚ್ಚು ಜಿಎಸ್‌ಟಿ ಅನ್ನು ಕಟ್ಟುವ ರಾಜ್ಯ ಎಂದರೆ ಅದು ಕರ್ನಾಟಕ. ರಾಜ್ಯದಿಂದ ಗೆದ್ದು ಹೋದ ಬಿಜೆಪಿಯ 25 ಸಂಸದರು ಸಂಸತ್ ನಲ್ಲಿ ತುಟಿ ಬಿಚ್ಚದೆ ರಾಜ್ಯಕ್ಕೆ ಬರಬೇಕಾದ ಪರಿಹಾರ ಹಾಗೂ ರೈತರ ಬರ ಪರಿಹಾರ, ಸೇರಿದಂತೆ ರಾಜ್ಯಕ್ಕೆ ಬರಬೇಕಾದ ಹಲವಾರು ಯೋಜನೆಗಳ ಪಾಲನ್ನು ಕೇಳದೆ ಅಸಮರ್ಥರಾಗಿದ್ದಾರೆ. ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡಿಸಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಪೊಲೀಸರಿಗೂ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು ಎಂದು ಪೊಲೀಸರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶವನ್ನು ವ್ಯಕ್ತಪಡಿಸಿದರು. ನಂತರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.

ಈ ಸಂದರ್ಭದಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್, ಯುವ ಕಾಂಗ್ರೆಸ್ ಅಧ್ಯಕ್ಷ ಎಚ್ ಪಿ ಗಿರೀಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ರಂಗನಾಥ್ , ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ಲೋಕೇಶ್, ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್, ಎಸ್ ಕುಮಾರೇಶ್ ,ಪ್ರಮುಖರಾದ ಎಚ್ ಪಾಲಾಕ್ಷಿ, ಎಂ . ರಾಹುಲ್,ಸಂದೀಪ್ ಸುಂದರ್ ರಾಜ್ , ,ಎಂ. ರಾಕೇಶ್, ಸುಹಾಸ್ ಗೌಡ, ಎನ್.ಎಸ್ ಆನಂದ್, ನದೀಮ್ ಮದರಿ ಪಾಳ್ಯ ಮುಕ್ಬಲ್ ಸೋಮಿನಕೊಪ್ಪ, ಚಂದ್ರಶೇಖರ್, ,ಪ್ರಶಾಂತ್ ರಾಯ್ , ಗೋಪಿ, ರಾಯಿಲ್, ಪ್ರಶಾಂತ್ ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X