ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ: ಕೆ.ಎಸ್ ಈಶ್ವರಪ್ಪ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು
ಶಿವಮೊಗ್ಗ: ಧಾರ್ಮಿಕ ಕೇಂದ್ರದಲ್ಲಿ ಚುನಾವಣಾ ಪ್ರಚಾರ ಆರೋಪ ಹಿನ್ನೆಲೆ ಬಿಜೆಪಿ ಬಂಡಾಯ ನಾಯಕ ಕೆ.ಎಸ್ ಈಶ್ವರಪ್ಪ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗದ ಗೋಪಾಳದ ರಂಗನಾಥಸ್ವಾಮಿ ದೇವಾಲಯಕ್ಕೆ ತೆರಳಿದ್ದ ಈಶ್ವರಪ್ಪ ಈ ವೇಳೆ ಮತಪ್ರಚಾರ ಮಾಡಿದ್ದಾರೆ. ಧಾರ್ಮಿಕ ಕೇಂದ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಚುನಾವಣಾ ಅಧಿಕಾರಿಗಳಿಂದ ತುಂಗಾನಗರ ಠಾಣೆಗೆ ದೂರು ಸಲ್ಲಿಸಲಾಗಿದೆ. ಹಾಗಾಗಿ ತುಂಗಾನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
Next Story