ಸಾಗರ | ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಬಾಲಕ ಮೃತ್ಯು
ಸಾಂದರ್ಭಿಕ ಚಿತ್ರ
ಸಾಗರ : ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರು ವರ್ಷದ ಬಾಲಕನೊಬ್ಬ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಮೃತ ಬಾಲಕನ್ನು ಜನ್ನತ್ ನಗರದ ಮಹಮ್ಮದ್ ನಯಾನ್ (6) ಎಂದು ಗುರುತಿಸಲಾಗಿದೆ. ಕಳೆದ ಐದು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕನನ್ನು ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು. ಶುಕ್ರವಾರ ಬಾಲಕನಿಗೆ ತೀವ್ರ ಜ್ವರ, ವಾಂತಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಶನಿವಾರ ಬೆಳಗ್ಗೆ ಮೃತಪಟ್ಟಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
Next Story