ಅಪ್ಪ-ಮಕ್ಕಳಿಂದ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ : ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ: ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಈಶ್ವರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರೇ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
“ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ” #shivamogga #shivamoggaloksabhaconstituency #ModiAgainIn2024
— K S Eshwarappa (Modi Ka Parivar) (@ikseshwarappa) April 14, 2024
ರಾಜ್ಯ @BJP4Karnataka ಮಾನ್ಯ ಅಧ್ಯಕ್ಷ @BYVijayendra ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, @narendramodi @AmitShah ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ.
— K S Eshwarappa (Modi Ka Parivar) (@ikseshwarappa) April 14, 2024