Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಈಶ್ವರಪ್ಪನವರು ಯಡಿಯೂರಪ್ಪನವರ ಕುಟುಂಬದ...

ಈಶ್ವರಪ್ಪನವರು ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ: ಬಿ.ವೈ ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ18 March 2024 3:04 PM IST
share
ಈಶ್ವರಪ್ಪನವರು ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ: ಬಿ.ವೈ ವಿಜಯೇಂದ್ರ

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಬಂಡಾಯವಾಗಿ ಸ್ಪರ್ಧಿಸುತ್ತಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪನವರು ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ. ಒಂದು ಕಾಲದಲ್ಲಿ ಯಡಿಯೂರಪ್ಪನವರು ಸೈಕಲ್ ನಲ್ಲಿ ರಾಜ್ಯಾದ್ಯಂತ ಸುತ್ತಾಡಿ ಕಟ್ಟಿದ ಫಲವಾಗಿ ಇಂದು ರಾಜ್ಯದಲ್ಲಿ ಪಕ್ಷ ಬಲಿಷ್ಠವಾಗಿದೆ. ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಅಥವಾ ತಳಮಟ್ಟದಲ್ಲಿದ್ದವರನ್ನು ಮೇಲಕ್ಕೆ ಬೆಳೆಸಿದ್ದಾರೋ ಎಂಬುದು ಮುಂಬರುವ ಲೋಕಸಭಾ ಚುನಾವಣೆ ಬಳಿಕ ಗೊತ್ತಾಗಲಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ವರಿಷ್ಠರು ಈ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದರು.

ವರಿಷ್ಠರು ಸಾಮೂಹಿಕವಾಗಿ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ನಮ್ಮ ಒತ್ತಡ ಏನೂ ಇಲ್ಲ. ಅದೂ ಅಲ್ಲದೆ ಗೆಲ್ಲುವ ಪಕ್ಷದಲ್ಲಿ ಸಮಸ್ಯೆಗಳು ಹೆಚ್ಚಾಗಿ ಇರುತ್ತದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಈ ಸಮಸ್ಯೆ ಯಾಕೇ ಇಲ್ಲ ಅಂದ್ರೆ ಅಲ್ಲಿ ಹೋದ ಅಭ್ಯರ್ಥಿಗಳಿಗೆ ಠೇವಣಿ ಸಿಗೋದಿಲ್ಲ ಎನ್ನುವುದು ಗೊತ್ತಿದೆ ಅದಕ್ಕೆ ಅಲ್ಲಿ ಸಮಸ್ಯೆ ಇಲ್ಲ ಎಂದು ಹೇಳಿದರು.

ಮೋದಿ ಪರವಾದ ಅಲೆ:

ಚುನಾವಣಾ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಅವರು ಇಂದು ಶಿವಮೊಗ್ಗಕ್ಕೆ ಆಗಮಿಸಿ ಪ್ರಚಾರ ನಡೆಸಲಿದ್ದಾರೆ. ಇಡೀ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪರವಾದ ಅಲೆ ಇದೆ. ಹಾಗಾಗಿ ಕಾಂಗ್ರೆಸ್ ​ನವರು ಅಭ್ಯರ್ಥಿಗಳನ್ನು ಹಾಕುವ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಯಾವುದೋ ಭ್ರಮೆಯಲ್ಲಿದ್ದ ಕಾಂಗ್ರೆಸ್‌ ನವರಿಗೆ ಮೋದಿ ಅಲೆ ಇರುವುದು ಈಗ ಅರಿವಾಗಿದೆ. ಹಾಗಾಗಿ ಅಭ್ಯರ್ಥಿಗಳ ಆಯ್ಕೆಗೆ ಚಿಂತಿಸುತ್ತಿದ್ದಾರೆ. ನಾವು ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪಿಸಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X