Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಕನ್ನಡದ ಬೇರು ಆಧುನಿಕತೆಯ ಬಾಣಕ್ಕೆ...

ಕನ್ನಡದ ಬೇರು ಆಧುನಿಕತೆಯ ಬಾಣಕ್ಕೆ ಸಿಲುಕಿ ಹಾಳಾಗಿ ಹೋಗುತ್ತಿದೆ: ಡಾ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ12 April 2025 6:04 PM IST
share
ಕನ್ನಡದ ಬೇರು ಆಧುನಿಕತೆಯ ಬಾಣಕ್ಕೆ ಸಿಲುಕಿ ಹಾಳಾಗಿ ಹೋಗುತ್ತಿದೆ: ಡಾ.ಪುರುಷೋತ್ತಮ ಬಿಳಿಮಲೆ

ಶಿವಮೊಗ್ಗ: ಪ್ರಾಥಮಿಕ ಶಿಕ್ಷಣದ ಹಂತದಲ್ಲಿ ಆಳವಾಗಿ ಒಡಮೂಡಬೇಕಾಗಿದ್ದ ಕನ್ನಡದ ಬೇರು ಆಧುನಿಕತೆಯ ಬಾಣಕ್ಕೆ ಸಿಲುಕಿ ಹಾಳಾಗಿ ಹೋಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟರು.

ನಗರದ ಎ.ಟಿ.ಎನ್.ಸಿ ಕಾಲೇಜಿನ ಚಂದನ ಸಭಾಂಗಣದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ, ಕುವೆಂಪು ವಿಶ್ವವಿದ್ಯಾಲಯ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಹಾಗೂ ಕುವೆಂಪು ವಿವಿ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆಯ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ʼಪದವಿ ಕನ್ನಡ ಪಠ್ಯಪುಸ್ತಕಗಳು : ಸಾಧ್ಯತೆಗಳು ಹಾಗೂ ಸವಾಲುಗಳುʼ ಒಂದು ದಿನದ ವಿಚಾರ ಕಮ್ಮಟ ಉದ್ಘಾಟಿಸಿ ಮಾತನಾಡಿದರು.

ಪ್ರಾಥಮಿಕ ಹಂತದಲ್ಲಿ ಹಾಳಾಗುತ್ತಿರುವ ಕನ್ನಡ ಬೇರಿನಿಂದ ಕನ್ನಡದ ನಿಜವಾದ ಅವನತಿ ಪ್ರಾರಂಭವಾದಂತೆ ಆಗುತ್ತದೆ. ಮೊದಲು ಶಿಕ್ಷಕರು ಮಕ್ಕಳಿಗೆ ಕನ್ನಡ ಕಲಿಸುವತ್ತ ಆಸಕ್ತಿ ತೋರಬೇಕು. ಎಷ್ಟೇ ಉತ್ತಮ ಪಠ್ಯ ಕೊಟ್ಟರು, ಶಿಕ್ಷಕರು ಸರಿಯಾಗಿ ಕಲಿಸದೆ ಇದ್ದರೆ, ಎಲ್ಲವೂ ವ್ಯರ್ಥ. ಹೀಗೆ ಮುಂದುವರೆದರೆ ಇನ್ನು ಮೂರು ವರ್ಷಗಳಲ್ಲಿ ಕನ್ನಡ ಆಡು ಭಾಷೆಯಾಗಿ ಉಳಿದರೆ, ಐದು ವರ್ಷಗಳಲ್ಲಿ ಕನ್ನಡದ ಶಾಲೆಗಳು ಮುಚ್ಚಿಹೋಗುವುದರಲ್ಲಿ ಆಶ್ಚರ್ಯವಿಲ್ಲ ಎಂದರು.

ಪ್ರಾಥಮಿಕದಲ್ಲಿ ಕನ್ನಡವನ್ನು ಹೇಳಿಕೊಡುವ ವಿಧಾನ ಐವತ್ತು ವರ್ಷ ಹಿಂದಿನದ್ದಾಗಿದೆ. ಪುಸ್ತಕದ ಭಾರದ ಆಧಾರದ ಮೇಲೆ ಕಲಿಯುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೀಗಾಗಿ ಕನ್ನಡ ಪುಸ್ತಕಗಳನ್ನು ತಾಂತ್ರಿಕವಾಗಿ ರೂಪಿಸುವ ಅಗತ್ಯವಿದೆ. ಕುಮಾರವ್ಯಾಸರ ಗಮಕ ಕೇಳುವ ಮನಸ್ಥಿತಿಯನ್ನು ಕನ್ನಡದ ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕಿದೆ. ಮೇಷ್ಟ್ರಿಗೆ ಗಮಕ ಪಾಠ ಮಾಡಲು ಬರೊಲ್ಲ ಎನ್ನುವಾಗ, ತಮ್ಮನ್ನು ತಾವು ಇಂತಹ ಕಮ್ಮಟಗಳ ಮೂಲಕ ಉನ್ನತಿಕರಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಇತ್ತಿಚೆಗೆ ಕ್ರಿಟಿಕಲ್ ಥಿಂಕಿಂಗ್ ಬಂದುಬಿಟ್ಟಿದೆ. ಕಣ್ಣಿಗೆ ಕಾಣುವ ಯಾವ ವಿಷಯಗಳನ್ನು ನಂಬದೆ, ವಿಮರ್ಶಿಸಿಯೇ ಸ್ವೀಕರಿಸುವ ಕಾಲ ಮಾನದಲ್ಲಿ ನಾವಿದ್ದೆವೆ. ನಿಮ್ಮ ಭವಿಷ್ಯದ ಜವಾಬ್ದಾರಿಗಳನ್ನು ನೀವೆ ತೆಗೆದುಕೊಳ್ಳುವಂತಾಗಬೇಕು. ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕನಿಷ್ಟ 2 ಲಕ್ಷ ಪದಗಳನ್ನು ಓದಬೇಕು. ಪಠ್ಯದೊಳಗಿನ ಪದಗಳನ್ನು ವಿಶಿಷ್ಟವಾಗಿ ಗ್ರಹಿಸಲು ಪ್ರಯತ್ನಿಸಬೇಕು. ಅನೇಕ ಕನ್ನಡದ ಉಪನ್ಯಾಸಕರು ಕೆಲಸ ಸಿಕ್ಕಿದ ಮೇಲೆ ತಮ್ಮಲ್ಲಿದ್ದ ಸೃಜನಶೀಲತೆಯನ್ನು ಸಾಯಿಸಿಬಿಡುತ್ತಾರೆ. ಅಧ್ಯಾಪಕರ ಮನೆಗಳಲ್ಲಿ ಗ್ರಂಥಾಲಯವಿಲ್ಲ. ಪ್ರತಿದಿನ ಪತ್ರಿಕೆಗಳನ್ನು ಓದಲ್ಲ. ಸತ್ತು ಹೋದ ಪಠ್ಯವನ್ನು ಇನ್ನಷ್ಟು ಸಾಯಿಸುತ್ತಿದ್ದಾರೆ. ತಮ್ಮ ಕೆಲಸದ ಜೊತೆಗೆ ಅಧ್ಯಾಪಕರು ರಿಯಲ್ ಎಸ್ಟೇಟ್ ಗೆ ಇಳಿದಿದ್ದಾರೆ. ಕನ್ನಡದ ಅಧ್ಯಾಪಕರು ಒಂದಿಷ್ಟು ಅಪ್ಡೇಟ್ ಆಗಬೇಕಿದೆ. ಭಾಷಾಂತರದ ಪೋಸ್ಟಗಳು ಸಮಾಜಿಕ ಜಾಲತಾಣದಲ್ಲಿ ಸಿಗುತ್ತಿದೆ. ಅದರೆಡೆಗೆ ಒಂದಿಷ್ಟು ನಾವೀನ್ಯ ಪೂರ್ಣವಾಗಿ ಗಮನಹರಿಸಿ. ಕನ್ನಡ ಎಂಎ ಮಾಡಿ ಅದರ ಸುತ್ತ ಸುತ್ತುತ್ತಿದ್ದರೆ ಉದ್ಯೋಗ ಪಡೆಯುವುದಾದರು ಹೇಗೆ?. ಕನ್ನಡ ಭಾಷೆಯ ಜೊತೆಗೆ ಇತರೆ ಕೌಶಲ್ಯಗಳನ್ನು ಯುವ ಅಧ್ಯಾಪಕ ಸಮೂಹ ರೂಡಿಸಿಕೊಳ್ಳಬೇಕು ಎಂದು ಹೇಳಿದರು.

ಕುವೆಂಪು ವಿವಿ ಕುಲಪತಿ ಡಾ.ಶರತ್ ಅನಂತಮೂರ್ತಿ ಮಾತನಾಡಿ, ಸಾಮಾಜಿಕ ವಿಜ್ಞಾನದ ವಿಷಯಗಳಿಗೆ ಅನುದಾನಗಳಿಲ್ಲ. ಕನ್ನಡವನ್ನು ಕೇವಲ ಸಾಹಿತ್ಯದ ಸಂವೇದನೆ ಎಂದಷ್ಟೇ ನೋಡಬಾರದು. ಒಬ್ಬ ಕನ್ನಡದ ಮೇಷ್ಟು ಸೋಶಿಯಾಜಿಸ್ಟ್ ಮತ್ತು ಅಂತ್ರಪಾಲಾಜಿಸ್ಟ್ ಆಗಿಯು ಕಾರ್ಯನಿರ್ವಹಿಸಬೇಕು. ಪಠ್ಯದ ಜೊತೆಗೆ ಶಿಕ್ಷಕರ ಮ್ಯಾನ್ಯುಯಲ್ ಮಾಡುವ ಅಗತ್ಯವಿದೆ ಎಂದು ಅನಿಸುತ್ತಿದೆ. ಎಲ್ಲರೂ ಎಲ್ಲವನ್ನೂ ಓದಬೇಕು. ವಿಜ್ಞಾನ ವಿದ್ಯಾರ್ಥಿ ಪಂಪ, ರನ್ನರ ಸಾಹಿತ್ಯ ಓದಬೇಕು. ಅಂತರ ಶಿಸ್ತೀಯತೆಯನ್ನು ಬೆಳೆಸಿಕೊಳ್ಳಬೇಕು. ಪರೀಕ್ಷಾ ಕ್ರಮಗಳಿಂದ ಶೈಕ್ಷಣಿಕ ಚಟುವಟಿಕೆ ವಿನಃ ಬೇರೆ ಯಾವುದೇ ಸೃಜನಶೀಲತೆಯನ್ನು ಬಿತ್ತಲಾಗದ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಹೇಳಿದರು.

ಎನ್‌ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ, ಕನ್ನಡ ಅಧ್ಯಾಪಕರ ವೇದಿಕೆ ಅಧ್ಯಕ್ಷೆ ಡಾ.ಸಬೀತಾ ಬನ್ನಾಡಿ, ಉಪಾಧ್ಯಕ್ಷ ಡಾ.ಕುಂಸಿ ಉಮೇಶ್ ಮಾತನಾಡಿದರು. ಪ್ರಾಂಶುಪಾಲರಾದ ಪಿ.ಆರ್.ಮಮತಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಡಾ.ಮುತ್ತಯ್ಯ, ಕಾರ್ಯಕ್ರಮ ಸಂಚಾಲಕ ಪ್ರವೀಣ್.ಬಿ.ಎನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X