ಶಿವಮೊಗ್ಗ| ಕುರುವಳ್ಳಿ-ಬಾಳೇಬೈಲು ಬೈಪಾಸ್ ರಸ್ತೆಯ ತಡೆಗೋಡೆ ಕುಸಿತ: ವಾಹನ ಸಂಚಾರ ನಿರ್ಬಂಧ
ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಕುಸಿದು ಬಿದ್ದ 56 ಕೋಟಿ ರೂ. ವೆಚ್ಚದ ಕಾಮಗಾರಿ
ಶಿವಮೊಗ್ಗ: ತೀರ್ಥಹಳ್ಳಿಯ ಕುರುವಳ್ಳಿ-ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ. ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ.
56 ಕೋಟಿ ವೆಚ್ಚದಲ್ಲಿ ಹೊಸ ತುಂಗಾ ಸೇತುವೆ ಹಾಗೂ ಬೈಪಾಸ್ ರಸ್ತೆ ನಿರ್ಮಿಸಲಾಗಿತ್ತು. ಸೋಮವಾರ ಸಂಜೆ ವೇಳೆ ಕುಸಿಯುವ ಹಂತಕ್ಕೆ ತಲುಪಿದ್ದ ತಡೆಗೋಡೆಗಳು ಮಂಗಳವಾರ ಸಂಜೆಯಾಗುವಷ್ಟರಲ್ಲಿ ಸಂಪೂರ್ಣ ಕುಸಿದು ಬಿದ್ದಿದೆ.
ಉದ್ಘಾಟನೆಗೊಂಡು ಕೆಲವೇ ತಿಂಗಳ ಒಳಗಾಗಿ ತಡೆಗೋಡೆ ಬಿದ್ದು ಮಣ್ಣು ಕುಸಿಯುತ್ತಿರುವುದು ಅವೈಜ್ಞಾನಿಕ ಕಾಮಗಾರಿಗೆ ಸಾಕ್ಷಿಯಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ. ಈಗಾಗಲೇ ವಾಹನ ಓಡಾಟವನ್ನು ನಿರ್ಬಂಧಿಸಲಾಗಿದ್ದು ಸ್ಥಳದಲ್ಲಿ ಡಿವೈಎಸ್ಪಿ ಗಜಾನನ ವಾಮನ ಸುತಾರ ಹಾಗೂ ಇತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Next Story