Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ವೇದಿಕೆಯಲ್ಲೇ ಜೆಡಿಎಸ್ ಶಾಸಕಿಗೆ...

ವೇದಿಕೆಯಲ್ಲೇ ಜೆಡಿಎಸ್ ಶಾಸಕಿಗೆ ಕಾಂಗ್ರೆಸ್‌ ಸೇರಲು ಆಹ್ವಾನ ನೀಡಿದ ಸಚಿವ ಮಧು ಬಂಗಾರಪ್ಪ!

ವಾರ್ತಾಭಾರತಿವಾರ್ತಾಭಾರತಿ23 March 2025 9:48 PM IST
share
ವೇದಿಕೆಯಲ್ಲೇ ಜೆಡಿಎಸ್ ಶಾಸಕಿಗೆ ಕಾಂಗ್ರೆಸ್‌ ಸೇರಲು ಆಹ್ವಾನ ನೀಡಿದ ಸಚಿವ ಮಧು ಬಂಗಾರಪ್ಪ!

ಶಿವಮೊಗ್ಗ: ತಾಲೂಕಿನ ಬಾರೆಹಳ್ಳ ಹಾಗೂ ಹಾಯ್ ಹೊಳೆ ಡ್ಯಾಂ ಅಭಿವೃದ್ಧಿ ಹಾಗೂ ಪುರದಾಳು ಗ್ರಾಮದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವಿವಾರ ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಇಂಗ್ಲಿಷ್ ಗಾದೆ ಮೂಲಕ ಜೆಡಿಎಸ್ ಶಾಸಕಿ ಶಾರದಾ ಪೂರ್ಯಾನಾಯ್ಕ ಅವರನ್ನು ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನಿಸಿದರು.

ಶಾರದಾ ಪೂರ್ಯಾನಾಯ್ಕ ಅವರು ನನ್ನ ಮೇಲೆ ಬಹಳ ಪ್ರೀತಿ ತೋರುತ್ತಾರೆ. ಆದರೆ ಚುನಾವಣೆ ಬಂದಾಗ ಬಹಳ ಕಷ್ಟ ಆಗುತ್ತದೆ. ಈಗ ಅಧಿಕಾರ ನಮ್ಮ ಬಳಿ ಇದೆ. ಹಾಗಾಗಿ ನಮ್ಮ ಪಕ್ಷಕ್ಕೆ ಬನ್ನಿ ಎಂದು ಕರೆಯುತ್ತಿದ್ದೇನೆ. ನಮ್ಮ ತಂದೆಯವರು ಯಾವಾಗಲೂ ಹೇಳುತ್ತಿದ್ದರು, ಬಿಸಿಲಿದ್ದಾಗ ಹುಲ್ಲು ಒಣಗಿಸಿಕೊಳ್ಳಬೇಕು ಅಂತ. ಈಗ ಬಿಸಿಲು ಇದೆ ಅಕ್ಕ ತೀರ್ಮಾನ ಮಾಡಿ ಎಂದು ಶಾರದಾ ಪೂರ್ಯಾನಾಯ್ಕ ಅವರಿಗೆ ʼಆಫರ್ʼ ನೀಡಿದರು.

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ:

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸೌಲಭ್ಯ ನೀಡುವುದು ಸರಕಾರದ ಕರ್ತವ್ಯ. ಪುರದಾಳು ಗ್ರಾಮದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರಿಗಾಗಿ ಕಟ್ಟಲಾಗಿದ್ದ ಡ್ಯಾಂ ಅತಿಯಾದ ಮಳೆಯಿಂದ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ ಎಂದು ಹೇಳಿದರು.

ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿರಿಸಿ ಈಗ ಅಭಿವೃದ್ಧಿಗೆ ಅನುದಾನ ನೀಡಲಾಗುತ್ತಿದೆ ಎಂದ ಅವರು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿ ಸಚಿವನಾಗಿ ನನ್ನ ಮೇಲಿದೆ. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಕೆಲಸ ಮಾಡಲಾಗುತ್ತಿದೆ. ಶಿಕ್ಷಣ ಇಲಾಖೆ ದೊಡ್ಡ ಇಲಾಖೆಯಾಗಿರುವುದರಿಂದ ಎಲ್ಲರೂ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಮಕ್ಕಳಿಗೆ ಪದೇ ಪದೇ ರಜೆ ಮಾಡಿಸಿ ಶಿಕ್ಷಣಕ್ಕೆ ಕೊರತೆಯಾಗುವಂತೆ ಪೋಷಕರು ಮಾಡಬಾರದು. ಪದೇ ಪದೇ ರಜೆಗೆ ಕಡಿವಾಣ ಹಾಕಲು ಫೇಸ್ ಅಟೆಂಡೆನ್ಸ್ ಯೋಜನೆ ಜಾರಿಗೆ ತರಲು ಯೋಜಿಸಲಾಗುತ್ತಿದೆ ಎಂದರು.

ಗ್ರಾಮಗಳಲ್ಲಿ ದೇವಸ್ಥಾನ ದೊಡ್ಡದಾಗಿ ಕಟ್ಟಿಸುವ ಬದಲು ಶಾಲೆಗಳನ್ನು ದೊಡ್ಡದಾಗಿ ಕಟ್ಟಿ.ಶಾಲೆಗಳನ್ನು ದೊಡ್ಡದಾಗಿ ಕಟ್ಟಿಸಿದರೆ ದೇವರೂ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.

ಶಾಸಕಿ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ಶರಾವತಿ ಮುಳುಗಡೆ ಪ್ರದೇಶದ ಗ್ರಾಮಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಬಾರೆಹಳ್ಳ ಹಾಗೂ ಹಾಯ್ ಹೊಳೆ ಡ್ಯಾಂ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಅಭಿನಂದನೆ ಸಲ್ಲಿಸಿದರು. ಸರಕಾರದಿಂದ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.

ಪುರದಾಳು ಗ್ರಾಪಂ ಉಪಾಧ್ಯಕ್ಷ ಎಚ್.ಎಸ್. ಪ್ರದೀಪ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಸಮಾರಂಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಭೂಪಾಲ್, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ, ಜಿ.ಡಿ. ಮಂಜುನಾಥ್, ಡಾ. ಶ್ರೀನಿವಾಸ್ ಕರಿಯಣ್ಣ, ವೈ.ಎಚ್. ನಾಗರಾಜ್, ಪುರದಾಳು ಹಾಗೂ ಅಗಸವಳ್ಳಿ ಗ್ರಾಪಂ ಅಧ್ಯಕ್ಷರು,ಸದಸ್ಯರು ಉಪಸ್ಥಿತರಿದ್ದರು.

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಯಾವುದೇ ಕಾರಣಕ್ಕೂ ಮೋಸವಾಗಲು ಬಿಡುವುದಿಲ್ಲ.ಸಂತ್ರಸ್ತರ ಪರವಾಗಿ ರಾಜ್ಯ ಸರಕಾರವೇ ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ. ನ್ಯಾಯಾಲಯ ಕೂಡ ಸಂತ್ರಸ್ತರ ಸಮಸ್ಯೆ ಬಗೆಹರಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಪಕ್ಷಾತೀತವಾಗಿ ಸಹಕಾರ ನೀಡಲಾಗುತ್ತಿದೆ.

-ಮಧು ಬಂಗಾರಪ್ಪ, ಸಚಿವ







share
ವಾರ್ತಾಭಾರತಿ
ವಾರ್ತಾಭಾರತಿ
Next Story
X