2,500 ಕೋಟಿ ರೂ. ವೆಚ್ಚದಲ್ಲಿ ಕೆಪಿಎಸ್ ಶಾಲೆ ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ : ಕೆಪಿಎಸ್ ಶಾಲೆ ಅಭಿವೃ ದ್ಧಿಗಾಗಿ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ 2 ಸಾವಿರ ಕೋಟಿ ರೂ.ಗಳಷ್ಟು ನೀಡಲು ಒಪ್ಪಿದೆ, ಅದಕ್ಕೆ ನಮ್ಮ ಸರಕಾರ 500 ಕೋಟಿ ರೂಪಾಯಿ ಹಾಕಿ ಒಟ್ಟು 2,500 ಕೋಟಿ ರೂ. ವೆಚ್ಚದಲ್ಲಿ ಕೆಪಿಎಸ್ ಶಾಲೆಯನ್ನು ಅಭಿವೃದ್ಧಿ ಪಡಿಸುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಅವಧಿಯ 7-8 ತಿಂಗಳಲ್ಲಿ ಶಿಕ್ಷಣದಲ್ಲಾದ ಬದಲಾವಣೆಯನ್ನು ಗಮನಿಸಿ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್‌ನವರು ಇಷ್ಟು ಮೊತ್ತದ ಹಣವನ್ನು ನೀಡಲು ಆಸಕ್ತಿ ತೋರಿದ್ದಾರೆ. ಈ ಹಣದಲ್ಲಿ ಒಟ್ಟು 400 ರಿಂದ 500 ಶಾಲೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದರು.
ಈ ಸಂದರ್ಭ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಪ್ರಮುಖರಾದ ಡಾ.ಶ್ರೀನಿವಾಸ್ ಕರಿಯಣ್ಣ, ಜಿ.ಡಿ.ಮಂಜುನಾಥ್ ಮತ್ತಿತರರಿದ್ದರು.
Next Story