ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ʼಎಕ್ಸ್ʼ ಖಾತೆ ಹ್ಯಾಕ್
ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ಎಕ್ಸ್ ಖಾತೆ ಹ್ಯಾಕ್ ಆಗಿರುವ ಕುರಿತು ವರದಿಯಾಗಿದೆ.
ಹ್ಯಾಕ್ ಆಗಿರುವ ಕುರಿತು ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದು,ಯಾವುದೇ ಅಸಂಬದ್ಧ ಪೋಸ್ಟ್ ಅಥವಾ ಸಂದೇಶ ಬಂದರೆ ನಿರ್ಲಕ್ಷಿಸುವಂತೆ ಮನವಿ ಮಾಡಿದ್ದಾರೆ.
ಎಕ್ಸ್ ಖಾತೆಯನ್ನು ಮರಳಿ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಪೋಸ್ಟ್ ಮಾಡಿದ್ದಾರೆ.
Next Story