ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ | ರಾಜ್ಯಪಾಲರ ನಡೆ ಖಂಡಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ
ಶಿವಮೊಗ್ಗ: ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ರಾಜ್ಯಪಾಲರ ವಿರುದ್ದ ಪ್ರತಿಭಟನೆ ನಡೆಸಿದರು.
ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ, ರಸ್ತೆ ತಡೆ ನಡೆಸಿ ದಿಢೀರ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಜೊತೆಗೆ ಬಿಜೆಪಿ- ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಪಾಲರು ಕೇಂದ್ರದ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿದ್ದಾರೆ. ಕಾನೂನುನನ್ನು ಗಾಳಿಗೆ ತೂರಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತ ಎಂದು ದೂರಿದರು.
ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆ ನಡೆಸಿದ್ದರಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಸೂಡಾ ಅಧ್ಯಕ್ಷ ಎಚ್.ಎಸ್ ಸುಂದರೇಶ್, ಮುಖಂಡರಾದ ಎನ್.ರಮೇಶ್, ಜಿ.ಡಿ ಮಂಜುನಾಥ್, ಕಲಗೋಡು ರತ್ನಾಕರ್ , ಎಚ್.ಪಿ ಗಿರೀಶ್, ಕೆ.ರಂಗನಾಥ್, ಶಾಮಿರ್ ಖಾನ್, ದೇವೇಂದ್ರಪ್ಪ, ಅನಿತಾ ಕುಮಾರಿ,ಕ ಲೀಂ ಪಾಷಾ ಸೇರಿದಂತೆ ಹಲವರಿದ್ದರು.