Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ವಕೀಲನ ಮೇಲೆ ಹಲ್ಲೆ ಖಂಡಿಸಿ...

ವಕೀಲನ ಮೇಲೆ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ1 Dec 2023 5:27 PM IST
share
ವಕೀಲನ ಮೇಲೆ ಹಲ್ಲೆ ಖಂಡಿಸಿ ಶಿವಮೊಗ್ಗದಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ

ಶಿವಮೊಗ್ಗ: ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ನಡೆದ ಹಲ್ಲೆ ಖಂಡಿಸಿ ಶಿವಮೊಗ್ಗದ ವಕೀಲರ ಸಂಘದ ನೇತೃತ್ವದಲ್ಲಿ ನೂರಾರು ವಕೀಲರು ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿದರು.

ಕೋರ್ಟ್ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಬಾಲರಾಜ ಅರಸ್ ರಸ್ತೆ, ಸೀನಪ್ಪ ಶೆಟ್ಟಿ ವೃತ್ತ, ಅಮೀರ್ ಅಹ್ಮದ್ ವೃತದವರೆಗೆ ಹೋಗಿ ವಾಪಸ್ ಶೀನಪ್ಪ ಶೆಟ್ಟಿ ವೃತ್ತಕ್ಕೆ ಬಂದು ಪ್ರತಿಭಟನಾಸಭೆ ನಡೆಸಿದರು. ವಕೀಲರ ಪ್ರತಿಭಟನೆ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಪ್ರತಿಭಟನೆ ನಡೆಸಿದ ವಕೀಲರು, ತಮ್ಮ ಮನವಿ ಸ್ವೀಕರಿಸಲು ಸ್ಥಳಕ್ಕೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿಗಳೇ ಬರಬೇಕು ಎಂದು ಪಟ್ಟು ಹಿಡಿದರು. ಸ್ಥಳಕ್ಕೆ ತಹಶೀಲ್ದಾರ್, ಡಿವೈಎಸ್ಪಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಂದರೂ ಕೂಡ ಅದನ್ನು ಒಪ್ಪದೇ ಜಿಲ್ಲಾಧಿಕಾರಿಗಳೇ ಬರಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಈ ಮಧ್ಯೆ ವಕೀಲರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ಕೂಡ ನಡೆಯಿತು. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆಯೇ ಜಿಲ್ಲಾ ರಕ್ಷಣಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿ ಕ್ರಮ ಕೈಗೊಳ್ಳುವು ದಾಗಿ ಭರವಸೆ ನೀಡಿದ ನಂತರ ವಕೀಲರು ಪ್ರತಿಭಟನೆ ಹಿಂಪಡೆದರು.

ಕ್ರಮಕ್ಕೆ ಆಗ್ರಹ:ಚಿಕ್ಕಮಗಳೂರಿನಲ್ಲಿ ವಕೀಲರ ಸಂಘದ ಸದಸ್ಯ ಪ್ರೀತಂ ಅವರು ಹೆಲ್ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಅಲ್ಲಿನ ನಗರದ ಪೊಲೀಸ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿ ಪ್ರೀತಂ ಅವರನ್ನು ಠಾಣೆಗೆ ಎಳೆದುಕೊಂಡು ಹೋಗಿ ಲಾಠಿ, ದೊಣ್ಣೆಯಿಂದ ಥಳಿಸಿ,ಶೂ ಕಾಲಿನಿಂದ ಹಲ್ಲೆ ನಡೆಸಿದ್ದಾರೆ. ಇದು ಮಾರಣಾಂತಿಕ ಹಲ್ಲೆಯಾಗಿದೆ. ಕೊಲೆ ಪ್ರಕರಣವನ್ನು ಪೊಲೀಸರ ಮೇಲೆ ದಾಖಲಿಸಬೇಕು. ಹಾಗೂ ಅವರನ್ನು ಸೇವೆಯಿಂದ ವಜಾಗೊಳಿಸಬೇಕು. ಅಮಾನತು ಮಾಡಿದರೆ ಸಾಲದು ತಕ್ಷಣ ಅವರನ್ನು ಬಂಧಿಸಬೇಕು ಎಂದು ವಕೀಲರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ಬಿ.ಜಿ. ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ, ಉಪಾಧ್ಯಕ್ಷ ಟಿ.ಎಸ್. ಟೇಕೋಜಿರಾವ್, ಗಿರೀಶ್ ಎಸ್., ಮಹೇಂದ್ರಕುಮಾರ್, ಕೆ.ಪಿ, ಶ್ರೀಪಾಲ್, ಮಂಜು, ವೈ.ಬಿ. ಚಂದ್ರಕಾಂತ್, ಅಶೋಕ್, ವಿದ್ಯಾರಾಣಿ ಸೇರಿದಂತೆ ನೂರಾರು ವಕೀಲರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X