ಸಾಗರ | ಕಾರಿಗೆ ಟಿಪ್ಪರ್ ಢಿಕ್ಕಿ: ಇಬ್ಬರು ಮೃತ್ಯು, ಐವರಿಗೆ ಗಾಯ

ಸಾಗರ: ಕಾರು ಮತ್ತು ಟಿಪ್ಪರ್ ಮಧ್ಯೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟು, ಐವರು ಗಾಯಗೊಂಡ ಘಟನೆ ತಾಲೂಕಿನ ಭೈರಾಪುರ ಗ್ರಾಮದ ಬಳಿ ಗುರುವಾರ ತಡರಾತ್ರಿ ನಡೆದಿದೆ.
ಫರ್ಹನ್ನಿಸಾ (34), ಅಬ್ದುಲ್ ರಝಾ(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸೈಯದ್ ಸಲೀಂ, ಝೋಯಾ ಶೇಕ್, ಬುಶ್ರಾ ಫಾತಿಮಾ ಶೇಕ್ ಮತ್ತು ಬೀಬಿ ಆಯಿಶ ಹಾಗೂ ಟಿಪ್ಪರ್ ಚಾಲಕ ಅನಿಲ್ ಎಂಬವರಿಗೆ ಗಾಯಗೊಂಡಿದ್ದಾರೆ. ಗಾಯಾಗಳುಗಳನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದವರು ಗೋವಾದಿಂದ ಶಿಕಾರಿಪುರದ ಹಿತ್ತಲ ಗ್ರಾಮಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಶಿಕಾರಿಪುರದಿಂದ ಆನಂದಪುರ ಕಡೆ ಬರುತ್ತಿದ್ದ ಜಲ್ಲಿ ತುಂಬಿದ ಟಿಪ್ಪರ್ ಲಾರಿ ಕಾರಿಗೆ ಢಿಕ್ಕಿ ಹೊಡೆದಿದೆ.
ಈ ಸಂಬಂಧ ಆನಂದಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story