ಶಿವಮೊಗ್ಗ | ಅಪ್ರಾಪ್ತನಿಂದ ಬೈಕ್ ಚಾಲನೆ : ವಾಹನ ಮಾಲಕನಿಗೆ 27 ಸಾವಿರ ರೂ.ದಂಡ
ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಮಾಲಕರೊಬ್ಬರಿಗೆ ಶಿವಮೊಗ್ಗ ನ್ಯಾಯಾಲಯವು 27 ಸಾವಿರ ರೂ.ದಂಡ ವಿಧಿಸಿದೆ.
ಎ.26ರಂದು ನಗರದ ಸಿಟಿ ಸೆಂಟರ್ ಬಳಿ ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುವ ಸಂದರ್ಭ ಅಪ್ರಾಪ್ತನೊಬ್ಬ ಬೈಕ್ ಚಲಾಯಿಸುತ್ತಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಬೈಕ್ ಮಾಲೀಕ ಎಂ.ಮುಜೀಬ್ ವಿರುದ್ಧ ಪಶ್ಚಿಮ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಈ ಸಂಬಂಧ ವಿಚಾರಣೆ ನಡೆಸಿದ 4ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರು ಬೈಕ್ ಮಾಲಕನಿಗೆ 27 ಸಾವಿರ ರೂ. ದಂಡ ವಿಧಿಸಿದ್ದಾರೆ.
Next Story