ಶಿವಮೊಗ್ಗ | ಅಕ್ರಮ ಮರಳುಗಾರಿಕೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ; ಮೂವರ ಬಂಧನ

ಬಂಧಿತ ಆರೋಪಿಗಳು
ಶಿವಮೊಗ್ಗ : ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳದ ಮೇಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ದಾಳಿ ನಡೆಸಿದ ಸಂದರ್ಭದಲ್ಲಿ ಜಿಲ್ಲೆಯ ಶಾಸಕರೊಬ್ಬರ ಪುತ್ರನೆಂದು ಹೇಳಿಕೊಂಡ ವ್ಯಕ್ತಿಯಿಂದ ಮೊಬೈಲ್ ಮೂಲಕ ಮಹಿಳಾ ಅಧಿಕಾರಿ ವಿರುದ್ಧ ಅಶ್ಲೀಲ ಪದ ಬಳಸಿ ನಿಂದಿಸಿ ಬೆದರಿಕೆ ಹಾಕಿದ ಘಟನೆ ನಡೆದಿತ್ತು.
ಅಲ್ಲದೆ, ಮಹಿಳಾ ಅಧಿಕಾರಿ ವಿರುದ್ಧ ಅಶ್ಲೀಲ ಪದ ಬಳಸಿ ಹರಿಹಾಯ್ದ 47 ಸೆಕೆಂಡ್ ಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಮಹಿಳಾ ಅಧಿಕಾರಿ ಭದ್ರಾವತಿ ಡಿವೈಎಸ್ಪಿಗೆ ಅನಾಮಧೇಯ 6 ರಿಂದ 7 ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಕಟ್ಟೆಯ ರವಿ ಬಿನ್ ಮಲ್ಲೇಶಪ್ಪ(30), ಹಾಸನ ಜಿಲ್ಲೆಯ ಅರಕಲ ಗೂಡು ಗ್ರಾಮದ ವರುಣ್ ಬಿನ್ ರಾಜಶೇಖರ್(34), ಭದ್ರಾವತಿಯ ಅಜಯ್ ಬಿನ್ ತಿಪ್ಪೇಶ್(28) ಬಂಧಿತ ಆರೋಪಿಗಳು.
ಭದ್ರಾವತಿ ಹಳೇ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.