ಶಿವಮೊಗ್ಗ: ವಿವಾಹ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ
ಶಿವಮೊಗ್ಗ: ಮದುಮಗಳಾಗಿ ಹಸೆಮಣೆ ಏರಬೇಕಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದಲ್ಲಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಕಟ್ಟೆಹಕ್ಲು ಗ್ರಾಮದ ಚೈತ್ರಾ(26) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ.
ಚೈತ್ರಗೆ ಮುಂದಿನ ಫೆ. 4 ರಂದು ವಿವಾಹ ನಿಶ್ಚಯವಾಗಿತ್ತು. ಆದರೆ, ಏಕಾಏಕಿ ಚೈತ್ರ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಎಂಕಾಂ ಪದವಿ ಪಡೆದಿದ್ದ ಚೈತ್ರ ಕಟ್ಟೆಹಕ್ಲಿನ ರಾಮಕೃಷ್ಣ ಮೆಡಿಕಲ್ನಲ್ಲಿ ಕೆಲಸ ಮಾಡುತ್ತಿದ್ದಳು. ನನಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ನನಗೆ ಮದುವೆ ಬೇಡವೆಂದು ವಿರೋಧ ಮಾಡುತ್ತಿದ್ದಳು ಎನ್ನಲಾಗಿದೆ. ಆದರೆ ಮನೆಯವರು ಆಕೆಯ ಮನವೊಲಿಸಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Next Story