ಶಿವಮೊಗ್ಗ: ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ, ಗ್ರಾ. ಪಂ. ಅಧ್ಯಕ್ಷರ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ
ಪ್ರಕಾಶ್ | ನಾಗೇಶ್
ಶಿವಮೊಗ್ಗ: ಇಂದು ಬೆಳ್ಳಂಬೆಳಿಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ. ಪಂ. ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.
ಶಿವಮೊಗ್ಗದ ಕೃಷಿ ನಗರದಲ್ಲಿರುವ ಕೃಷಿ ಇಲಾಖೆ ಅಧಿಕಾರಿ ಪ್ರಕಾಶ್ ನಿವಾಸದ ಮೇಲೆ ಲೋಕಾ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಪ್ರಕಾಶ್ ವಿಚಾರಣೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್.ಪಿ. ಮಂಜುನಾಥ ಚೌಧರಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
Next Story