ಶಿವಮೊಗ್ಗ | 25 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿದ್ದ ಶಿರಾಳಕೊಪ್ಪ ಪುರಸಭೆ ಕಾಂಗ್ರೆಸ್ ತೆಕ್ಕೆಗೆ
ಶಿವಮೊಗ್ಗ: ಬಿಜೆಪಿ ತೆಕ್ಕೆಯಲ್ಲಿದ್ದ ಶಿರಾಳಕೊಪ್ಪ ಪುರಸಭೆ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ ಬಂದಿದೆ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ.
ಪುರಸಭೆ ನೂತನ ಅಧ್ಯಕ್ಷರಾಗಿ ಮಮತಾ ನಿಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಮುದಾಸಿರ್ ಅಹಮ್ಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
17 ಜನ ಸದಸ್ಯರ ಬಲ ಇರುವ ಪುರಸಭೆ ಕಳೆದ ಬಾರಿ ಬಿಜೆಪಿ ಅಧಿಕಾರದಲ್ಲಿ ಇತ್ತು, ಎರಡನೇ ಅವಧಿಗೆ ಕಾಂಗ್ರೆಸ್ಗೆ 11 ಜನ ಸದಸ್ಯರ ಬಲದಿಂದ ಅಧಿಕಾರ ಹಿಡಿದಿದೆ.
ಕಳೆದ 25 ವರ್ಷಗಳಿಂದ ಸುದೀರ್ಘ ಅಧಿಕಾರದಲ್ಲಿದ್ದ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಬಿಜೆಪಿಯ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ, ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಸಕ್ಷೇತ್ರದಲ್ಲೇ ಮುಖಭಂಗವಾಗಿದೆ.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌಡ, ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
Next Story