ಶಿವಮೊಗ್ಗ | ರಸ್ತೆ ಬದಿಯಲ್ಲಿ ಕೈ ಚೀಲದಲ್ಲಿ ನವಜಾತ ಶಿಶು ಪತ್ತೆ
ಶಿವಮೊಗ್ಗ: ರಸ್ತೆ ಬದಿಯಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ನಗರದ ಶ್ರೀರಾಮಪುರದ ಬಳಿ ನಡೆದಿದೆ.
ಕಳೆದ ರಾತ್ರಿ ಹೆರಿಗೆಯಾಗಿರುವ ಸಾಧ್ಯತೆ ಇದೆ. ಹೆರಿಗೆಯಾದ ಬಳಿಕ ತಾಯಿಯು ಮಗುವನ್ನು ಕೈ ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಇಟ್ಟು ಹೋಗಿದ್ದಾರೆ. ಇದನ್ನು ಗಮನಿಸಿದ ಯಾರೋ ಸ್ಥಳೀಯರು ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆಯವರು ಬರುವ ಮೊದಲೇ ಸ್ಥಳೀಯರು ಮಗುವನ್ನು ರಕ್ಷಿಸಿ ಸ್ನಾನ ಮಾಡಿ ಆರೈಕೆ ಮಾಡಿದ್ದಾರೆ.
ಸದ್ಯ ಮಗುವನ್ನು ಮೆಗ್ಗಾನ್ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗಕ್ಕೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಾಭಾಯಿ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದುಕೊಂಡರು.
ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Next Story